ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಲ್ಲೂ ಮನೆಮಾಡಿದೆ. ಆದರೆ ಎಷ್ಟೋ ಮನೆಗಳಲ್ಲಿ ಇದೇ ಪಟಾಕಿಯಿಂದ ಕಣ್ಣೀರು ಹಾಕುವಂತಾಗಿದೆ.
ಪಟಾಕಿ ಸಿಡಿತದಿಂದ ನಗರದಲ್ಲಿ ಕಳೆದ ಎರಡ್ಮೂರು ದಿನಗಳಿಂದ 250ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿಯುಂಟಾಗಿದೆ. ಆಘಾತಕಾರಿ ವಿಷಯ ಎಂದರೆ ಕೆಲ ಜನರು ಶಾಶ್ವತವಾಗಿ ದೃಷ್ಟಿ ಕಳ್ಕೊಂಡಿದ್ದಾರೆ. ಬೆಳಕಿನ ಹಬ್ಬ ಅಂಥವರ ಪಾಲಿಗೆ ಕತ್ತಲು ಆವರಿಸುವಂತೆ ಮಾಡಿದೆ.
ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 90 ಗಾಯಾಳುಗಳು ದಾಖಲಾಗಿದ್ದರೆ, ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 37, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 35, ಹಾಗೇನೆ ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ 13 ಮಂದಿ, ಮೋದಿ ಆಸ್ಪತ್ರೆಯಲ್ಲಿ 3 ಮಂದಿ ಮತ್ತು ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ 4 ಕೇಸ್ಗಳು ದಾಖಲಾಗಿವೆ.
ಬೆಂಗಳೂರಿನಲ್ಲಿ ಪಟಾಕಿ ಸಿಡಿದು 250ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿ

