Saturday, October 25, 2025

ರಾಜ್ಯದ ವಿವಿದೆಡೆ ಪಟಾಕಿ ಸಿಡಿತದಿಂದ ಅವಘಡ: ಗಾಯಾಳುಗಳ ಪೈಕಿ ಶೇಕಡ 60ಕ್ಕಿಂತ ಹೆಚ್ಚು ಮಕ್ಕಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೀಪಾವಳಿ ಆಚರಣೆ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಸಂಭವಿಸಿದ ಅವಘಡಗಳಲ್ಲಿ ಗಾಯಗೊಂಡು ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಅನೇಕ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾರಾಯಣ ನೇತ್ರಾಲಯದಲ್ಲಿ ಒಟ್ಟು 75 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ನಾರಾಯಣ ನೇತ್ರಾಲಯದ ನಿರ್ದೇಶಕರಾದ ಡಾ. ನರೇನ್ ಶೆಟ್ಟಿ ತಿಳಿಸಿದ್ದಾರೆ.

ಒಟ್ಟು ಪ್ರಕರಣಗಳಲ್ಲಿ ಶೇಕಡ 60ಕ್ಕಿಂತ ಹೆಚ್ಚು ಮಕ್ಕಳು ಗಾಯಗೊಂಡಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಪಟಾಕಿ ಹಚ್ಚುವಾಗ ಮಕ್ಕಳ ಮೇಲೆ ನಿಗಾವಹಿಸುವುದು ಮತ್ತಿತರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

error: Content is protected !!