ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳದಿಂದ ಕನಿಷ್ಠ ನಾಲ್ಕು ಸುಟ್ಟ ಶವಗಳನ್ನ ವಶಪಡಿಸಿಕೊಂಡಿದ್ದು, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮೃತದೇಹಗಳು ಮತ್ತು ಗಾಯಗೊಂಡ ವ್ಯಕ್ತಿಯನ್ನು ಕಲ್ಯಾಣಿಯ ಜೆಎನ್ಎಂ ಆಸ್ಪತ್ರೆಗೆ ಸಾಗಿಸಲಾಗಿದೆ.
ಕಲ್ಯಾಣಿಯ ರಥಾಲಾ ಪ್ರದೇಶದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಫೋಟಕ್ಕೆ ಬಲಿಯಾದವರು ಕಾರ್ಖಾನೆಯ ಉದ್ಯೋಗಿಗಳು ಎಂದು ನಿವಾಸಿಗಳು ಹೇಳಿದ್ದಾರೆ.