ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, 10 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ವಿರುದನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮುತೇವನಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಗಾಯಗೊಂಡವರ ಸಂಖ್ಯೆಯ ಬಗ್ಗೆ ಯಾವುದೇ ಮಾಹಿತಿ ದೊರಕಿಲ್ಲ.
ಇನ್ನೂ ಕಾರ್ಮಿಕರು ಒಳಗೆ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಒಟ್ಟಾರೆ ಮೂರು ಕಟ್ಟಡಗಳು ನೆಲಸಮವಾಗಿವೆ. ಸ್ಫೋಟದ ಮೂಲದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.