ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಹಬ್ಬ, ಮದುವೆ, ರಾಜಕೀಯ ಸಮಾರಂಭಗಳಲ್ಲಿ ಪಟಾಕಿ ನಿಷೇಧಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅತ್ತಿಬೆಲೆ ದುರಂತದ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದೆ. ಸಭೆ ಬಳಿಕ ಮಾತನಾಡಿದ ಸಿಎಂ, ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ ಇದೆ. ಉಳಿದ ಪಟಾಕಿಗಳಿಗೆ ನಿಷೇಧ ಹೇರಲಾಗಿದೆ ಎಂದರು.
ಗಣೇಶ ಹಬ್ಬ, ಮದುವೆ ಮತ್ತು ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಸಿಡಿಸುವಂತಿಲ್ಲ. ಪ್ರತಿಯೊಬ್ಬರೂ ದೀಪಾವಳಿ ಸಮಯಯಲ್ಲಿ ಮಾತ್ರ ಹಸಿರು ಪಟಾಕಿ ಬಳಸಬಹುದು ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಹಸಿರು ಪಟಾಕಿ ನಿಯಮಾವಳಿಗಳಿಗೆ ವಿರುದ್ಧವಾಗಿ ಅಂಗಡಿಗಳಿದ್ದರೆ ಅದರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದರು. ಅಲ್ಲದೆ ಪಟಾಕಿ ಅಂಗಡಿಗಳಿಗೆ ಲೈಸೆನ್ಸ್ ಅನ್ನು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರವೇ ಪಾಲಿಸಬೇಕು ಎಂದು ಹೇಳಿದರು.