673 ಡ್ರೋನ್‌ಗಳ ಮೂಲಕ ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ: ಹೊಸ ವರ್ಷದಲ್ಲಿ 2 ಗಿನ್ನೆಸ್‌ ದಾಖಲೆ ಬರೆದ ರಸ್‌ ಅಲ್‌ ಖೈಮಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಶ್ವವು ಹೊಸ ವರ್ಷ ವನ್ನು ಸಡಗರ-ಸಂಭ್ರಮದ ಮೂಲಕ ಬರಮಾಡಿಕೊಂಡಿದ್ದು, ಈ ವೇಳೆ ಪಟಾಕಿ ಸಿಡಿಸಿ, ಹಾಡಿ, ಕುಣಿದು, ನಲಿದು ಹೊಸ ಸಂವತ್ಸರವನ್ನು ಸ್ವಾಗತಿಸಸಿದರು.

ಯುಎಇಯ ರಸ್‌ ಅಲ್‌ ಖೈಮಾ (Ras Al Khaimah) ನಗರವು ಕೂಡ ಅದ್ದೂರಿಯಾಗಿ ಹೊಸ ವರ್ಷವನ್ನು ಸ್ವಾಗತಿಸಿದ್ದು, ಇದೀಗ ಎರಡು ಗಿನ್ನೆಸ್‌ ದಾಖಲೆ ಬರೆದಿದೆ.

ರಸ್‌ ಅಲ್‌ ಖೈಮಾದಲ್ಲಿ ಶನಿವಾರ ರಾತ್ರಿ 673 ಡ್ರೋನ್‌ಗಳನ್ನು ಬಳಸಿ ಸುಮಾರು 4.7 ಕಿ.ಮೀ ವ್ಯಾಪ್ತಿಯಲ್ಲಿ ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿ, ಕೊನೆಗೆ ಆಗಸದಲ್ಲಿಯೇ ‘ಹ್ಯಾಪಿ ನ್ಯೂ ಇಯರ್‌ 2023’ (Happy New Year 2023) ಎಂಬ ಅಕ್ಷರಗಳು ಮೂಡುವ ಮೂಲಕ ಶುಭಕೋರಲಾಗಿದೆ. ಹಾಗಾಗಿ, ರಸ್‌ ಅಲ್‌ ಖೈಮಾದಲ್ಲಿ ಪಟಾಕಿ ಹಾಗೂ ದೀಪಗಳ ಚಿತ್ತಾರ ಮೂಡಿಸಿದ್ದು ಎರಡು ಗಿನ್ನೆಸ್‌ ದಾಖಲೆ ಬರೆದಿದೆ. ಸುಮಾರು 1,100 ಮೀಟರ್‌ ಎತ್ತರದಲ್ಲಿ ಪಟಾಕಿ ಸಿಡಿಸಿ, ವಿದ್ಯುತ್‌ ದೀಪಗಳನ್ನು ಬೆಳಗಲಾಗಿದೆ. ಹೀಗೆ, ಆಗಸದಲ್ಲಿ ಬೆಳಕಿನ ರಂಗಿನಾಟವಿರುವ 12 ನಿಮಿಷದ ವಿಡಿಯೊವನ್ನು ರಸ್‌ ಅಲ್‌ ಖೈಮಾದ ಆಡಳಿತವು ಶೇರ್‌ ಮಾಡಿದೆ.


ಇದಕ್ಕೂ ಮೊದಲು ಸುಮಾರು 458 ಡ್ರೋನ್‌ಗಳನ್ನು ಬಳಸಿ, ಪಟಾಕಿ ಸಿಡಿಸಿ, ಬೆಳಕಿನ ಚಿತ್ತಾರ ಮೂಡಿಸಿದ್ದು ಗಿನ್ನೆಸ್‌ ದಾಖಲೆ ಆಗಿತ್ತು. ಈಗ ಈ ದಾಖಲೆಯನ್ನು ರಸ್‌ ಅಲ್‌ ಖೈಮಾ ಮುರಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!