ಪಟಾಕಿ ಕಾರ್ಖಾನೆ ಸ್ಫೋಟ: ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಖ್ರಾಜ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾಹೇವಾ ಗ್ರಾಮದಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿತ್ತು.

ಸ್ಫೋಟದ ಬಗ್ಗೆ ಮಾಹಿತಿ ಪಡೆದ ಕೂಡಲೇ 10 ಅಗ್ನಿಶಾಮಕ ವಾಹನಗಳು ಹಾಗೂ ಆಂಬುಲೆನ್ಸ್‌ಗಳು ಘಟನಾ ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಗರಾಜ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾನು ಭಾಸ್ಕರ್ ಮಾತನಾಡಿ, ‘ಪಟಾಕಿ ಕಾರ್ಖಾನೆ ಶಾಹಿದ್ (35) ಎಂಬಾತನಿಗೆ ಸೇರಿದೆ. ಘಟನೆಯಲ್ಲಿ 6 ಮಂದಿಯೊಂದಿಗೆ ಆತನೂ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದಾಗ ಸುಮಾರು 18 ಜನರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಇರಿಸಲಾಗಿದ್ದ ರಾಸಾಯನಿಕಗಳಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಸ್ಫೋಟ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಎಡಿಜಿಪಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!