ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಕಾಸರಗೋಡಿನಲ್ಲಿ ದೇವಸ್ಥಾನದ ಉತ್ಸವದಲ್ಲಿ ಪಟಾಕಿ ಸಿಡಿದು 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ನೀಲೇಶ್ವರಂ ಬಳಿ ದೇವಸ್ಥಾನದ ಉತ್ಸವದ ವೇಳೆ ಪಟಾಕಿ ಸಿಡಿಸುವ ವೇಳೆ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಗಾಯಗೊಂಡವರಲ್ಲಿ ಎಂಟು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.
ವಿವರಗಳ ಪ್ರಕಾರ, ವೀರರ್ಕಾವು ದೇವಾಲಯದ ಬಳಿಯ ಪಟಾಕಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ತಕ್ಷಣ ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಆಯುಕ್ತರು ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಂತ್ರಸ್ತರ ರಕ್ಷಣೆ ಹಾಗೂ ನೆರವು ನೀಡಲು ತ್ವರಿತ ಕ್ರಮ ಕೈಗೊಂಡಿದ್ದಾರೆ.