ಸಲ್ಮಾನ್​ ಮನೆ ಮೇಲೆ ಗುಂಡಿನ ದಾಳಿ: ತಾಪಿ ನದಿಯಲ್ಲಿ ಬಂದೂಕು ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಟ ಸಲ್ಮಾನ್​ ಖಾನ್​ ಬಂಗಲೆ ಮೇಲೆ ನಡೆದ ಗುಂಡಿನ ದಾಳಿ ಸಂಬಂಧ ಕೆಲವರನ್ನು ಬಂಧಿಸಲಾಗಿದೆ.  ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಅಪರಾಧದಲ್ಲಿ ಬಳಸಿದ ಮೊದಲ ಗನ್ ಪೊಲೀಸರಿಗೆ ಸಿಕ್ಕಿತ್ತು. ಇದೀಗ ಎರಡನೇ ಗನ್ ಕೂಡ ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.‌

ತನಿಖೆಯ ವೇಳೆ, ಸೂರತ್‌ನ ತಾಪಿ ನದಿಯಲ್ಲಿ ಗನ್ ಎಸೆದಿರುವುದಾಗಿ ಹೇಳಿದ್ದರು. ಅವರ ಹೇಳಿಕೆ ಬೆನ್ನಲ್ಲೇ ಕಾರ್ಯಚರಣೆ ನಡೆಸಿದ ಬಳಿಕ ಎರಡನೇ ಗನ್ ಕೂಡ ಮುಂಬೈ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೊತೆಗೆ 3 ಮ್ಯಾಗಜೀನ್‌ಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಮುಂಬೈ ನಿವಾಸದ ಹೊರಗೆ ಏ.14ರಂದು ಗುಂಡಿನ ಸದ್ದು ಕೇಳಿ ಬಂದಿತ್ತು. ಈ ದಾಳಿಯಲ್ಲಿ ತಮ್ಮದೇ ಕೈವಾಡವಿದೆ ಎಂದು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಹೇಳಿಕೊಂಡಿದ್ದರು. ಅನ್ಮೋಲ್ ಈಗ ಅಮೆರಿಕದಲ್ಲಿದ್ದಾರೆ. ಸಲ್ಮಾನ್ ಮನೆಯ ಹೊರಗೆ ನಡೆದ ಗುಂಡಿನ ದಾಳಿ ಹೊಣೆ ಹೊತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಇಬ್ಬರೂ ಶಂಕಿತರನ್ನು ಬಂಧಿಸಿ ತನಿಖೆ ಚುರುಕುಗೊಳಿಸಿದ್ದರು. ಸಿಸಿಟಿವಿ ದೃಶ್ಯದಲ್ಲಿ ಕಾಣಿಸಿಕೊಂಡ 2 ಶೂಟರ್‌ಗಳನ್ನು ಮುಂಬೈ ಪೊಲೀಸರು ಗುರುತಿಸಿ ಬಂಧಿಸಿದ್ದರು.

ಅನ್ಮೋಲ್‌ನ ಫೇಸ್‌ಬುಕ್ ಪೇಜ್‌ನಲ್ಲಿ, ಈ ಘಟನೆ ಟ್ರೈಲರ್ ಮಾತ್ರ. ಇದಕ್ಕಿಂತಲೂ ಭೀಕರ ಪರಿಣಾಮವನ್ನು ಮುಂದೆ ಎದುರಿಸಬೇಕಾಗುತ್ತದೆ ಎಂದು ಸಲ್ಮಾನ್ ಖಾನ್‌ಗೆ ಎಚ್ಚರಿಕೆ ನೀಡಿದ್ದರು.

ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್, ಸಲ್ಮಾನ್ ಖಾನ್ ಹತ್ಯೆ ಮಾಡುವುದಾಗಿ ಹೇಳಿದ್ದ. ತಾನು ಟಾರ್ಗೆಟ್ ಮಾಡಿರುವ 10 ಮಂದಿ ಹೆಸರಿನ ಪಟ್ಟಿಯಲ್ಲಿ ಸಲ್ಮಾನ್ ಖಾನ್ ಮೊದಲಿಗರಾಗಿದ್ದಾರೆ ಎಂದಿದ್ದ. 1998ರ ಕೃಷ್ಣಮೃಗ ಬೇಟೆ ಆರೋಪ ಹೊತ್ತಿರುವ ಬಾಲಿವುಡ್ ನಟನ ಮೇಲೆ ಬಿಷ್ಣೋಯ್ ಹಗೆ ಸಾಧಿಸುತ್ತಿದ್ದಾನೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!