ಇರಾನ್ ಬೀಚ್ ಮಾರ್ಕೆಟ್‌ನಲ್ಲಿ ಗುಂಡಿನ ಮಳೆ: ಯೋಧ, ಮಹಿಳೆ, ಬಾಲಕಿ ಸಹಿತ ಐವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇರಾನ್‌ನ ನೈಋತ್ಯ ಭಾಗದಲ್ಲಿರುವ ಇಜಿಹ್‌ನ ಬೀಚ್ ಮಾರ್ಕೆಟ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಭದ್ರತೆಗೆ ನಿಯೋಜಿಸಲಾದ ಯೋಧ, ಮಹಿಳೆ, ಬಾಲಕಿ ಸೇರಿದಂತೆ ಕನಿಷ್ಟ ಐವರು ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ.

ಮಾರ್ಕೆಟ್ ಪರಿಸರಕ್ಕೆ ನುಗ್ಗಿದ ಆಗಂತುಕ ಬಂದೂಕುಧಾರಿಗಳು ಏಕಾಏಕಿ ಗುಂಡಿನ ಮಳೆಗರೆದಿದ್ದು, ಯಾವ ಉದ್ದೇಶಕ್ಕಾಗಿ ಈ ಕೃತ್ಯ ನಡೆಸಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here