ಪಾಕಿಸ್ತಾನದ ಗ್ವಾದರ್ ಬಂದರಿನಲ್ಲಿ ಗುಂಡಿನ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ಗ್ವಾದರ್ ಬಂದರಿನಲ್ಲಿ ಶಸ್ತ್ರಸಜ್ಜಿತ ದಾಳಿಕೋರರು ಸ್ಫೋಟ ನಡೆಸಿದ್ದಾರೆ.

ಬಂದರಿನಲ್ಲಿ ದಾಳಿಕೋರರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಭದ್ರತಾ ಸಿಬ್ಬಂದಿಯ ಪ್ರತೀಕಾರದ ಗುಂಡಿನ ದಾಳಿಯಲ್ಲಿ ಇಬ್ಬರು ದಾಳಿಕೋರರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿದೆ.

ಪಾಕಿಸ್ತಾನದ ಗ್ವಾದರ್ ಬಂದರಿನಲ್ಲಿ ಸರಣಿ ಬಾಂಬ್ ಸ್ಪೋಟ ಸಂಭವಿಸಿದೆ. ಪಾಕಿಸ್ತಾನದ ಐಎಸ್‌ಐ, ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.

ಇತ್ತ ಬಲೂಚಿಸ್ತಾನ್ ಪ್ರದೇಶದಲ್ಲಿನ ದಾಳಿಯ ಹೊಣೆಯನ್ನು ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ(ಬಿಎಲ್‌ಎ)ಯ ಮಜೀದ್ ಬ್ರಿಗೇಡ್ ಹೊತ್ತುಕೊಂಡಿದೆ.

ಗ್ವಾದರ್ ಬಂದರು ಮಹತ್ವಾಕಾಂಕ್ಷೆಯ ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್(CPEC) ಯೋಜನೆಯ ಪ್ರಮುಖ ಭಾಗವಾಗಿದೆ.2022 ರಲ್ಲಿ ಇಸ್ಲಾಮಾಬಾದ್‌ನೊಂದಿಗಿನ ಕದನ ವಿರಾಮ ಒಪ್ಪಂದವನ್ನು ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ ಕೊನೆಗೊಳಿಸಿದ ನಂತರ ಪಾಕಿಸ್ತಾನವು ಖೈಬರ್ ಪಖ್ತುಂಕ್ವಾ ಮತ್ತು ಬಲೂಚಿಸ್ತಾನ್ ಪ್ರದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾರಿ ಹೆಚ್ಚಳ ಆಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!