ಪಾಕಿಸ್ತಾನದಲ್ಲಿ ಪ್ರಯಾಣಿಕರ ವಾಹನಗಳ ಮೇಲೆ ಗುಂಡಿನ ದಾಳಿ: 50 ಮಂದಿ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಪಾಕಿಸ್ತಾನದ ಖೈಬರ್ ಪಖ್ತುಂಕ್ವಾದ ಕುರ್ರಂ ಜಿಲ್ಲೆಯಲ್ಲಿ ಗುರುವಾರ ಅತಿದೊಡ್ಡ ಭಯೋತ್ಪಾದಕ ದಾಳಿ ನಡೆದಿದೆ . ವಾಯುವ್ಯ ಪಾಕಿಸ್ತಾನದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮೂರು ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕುರ್ರಂ ಜಿಲ್ಲೆಯಲ್ಲಿ ಉಗ್ರರು ವಾಹನಗಳ ಮೇಲೆ ಮನಬಂದಂತೆ ಗುಂಡಿ ದಾಳಿ ನಡೆಸಿದ್ದಾರೆ.ಈ ವಾಹನಗಳು ಪರಾಚಿನಾರ್‌ನಿಂದ ಖೈಬರ್ ಪಖ್ತುಂಖ್ವಾದ ರಾಜಧಾನಿ ಪೇಶಾವರಕ್ಕೆ ಬೆಂಗಾವಲು ಪಡೆಯಲ್ಲಿ ಪ್ರಯಾಣಿಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದಾಳಿಯಲ್ಲಿ ಆರು ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ 50 ಮಂದಿ ಮೃತಪಟ್ಟಿದ್ದಾರೆ ಮತ್ತು ಇತರ 14 ಜನ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!