ಹೊಸದಿಗಂತ ಡಿಜಿಟಲ್ ಡೆಸ್ಕ್:
2023-24ನೇ ಶೈಕ್ಷಣಿಕ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪ್ರವೇಶ ಪ್ರಕ್ರಿಯೆಯು ಮೇ 22, 2023 ರಿಂದ ಪ್ರಾರಂಭವಾಗಲಿದೆ.
ಈಗಾಗಲೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರಥಮ ಪಿಯುಸಿಗೆ ಪ್ರವೇಶ ಪಡೆಯಬಹುದು.
ರಾಜ್ಯದಲ್ಲಿ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಸದರಿ ಶೈಕ್ಷಣಿಕ ಪ್ರವೇಶ ಪ್ರಕ್ರಿಯೆಯನ್ನು ಆರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ ಮೇ 22, 2023 ರಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿ ದಾಖಲಾತಿ ಪ್ರಕ್ರಿಯೆ ಶುರುವಾಗಲಿದೆ.
2023-24ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿ:
ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭ ದಿನಾಂಕ : 22-05-2023
ದ್ವಿತೀಯ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭ ದಿನಾಂಕ : 22-05-2023
ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಅಂತಿಮ ದಿನಾಂಕ : 15-06-2023
ದ್ವಿತೀಯ ಪಿಯುಸಿ ದಾಖಲಾತಿ ಪ್ರಕ್ರಿಯೆ ಅಂತಿಮ ದಿನಾಂಕ : 15-06-2023