ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧದಲ್ಲಿ ಮಹತ್ವದ ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆದಿದ್ದು, ಇದೀಗ ಸಭೆ ಮುಕ್ತಾಯಗೊಂಡಿದೆ.
ಇನ್ನೇನು ಕೆಲವೇ ಕ್ಷಣದಲ್ಲಿ ನೂತನ ಸಿಎಂ ಸಿದ್ಧರಾಮಯ್ಯ ಸುದ್ದಿಗೋಷ್ಠಿ ನಡೆಸಲಿದ್ದು, ಪ್ರಣಾಳಿಕೆಯಲ್ಲಿನ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಲಿದ್ದಾರೆ.
ಇದೀಗ ಎಲ್ಲರ ಚಿತ್ತ ಸಿಎಂ ಸುದ್ದಿಗೋಷ್ಟಿಯತ್ತ ನೆಟ್ಟಿದೆ.