ಸಿಎಂ ಸಿದ್ದರಾಮಯ್ಯ ನೇತೃತ್ವದ ಚೊಚ್ಚಲ ಕ್ಯಾಬಿನೆಟ್‌ ಮೀಟಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರಮಾಣ ವಚನ ಸ್ವೀಕರಿಸಿ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ‌ ಚೊಚ್ಚಲ ಕ್ಯಾಬಿನೆಟ್‌ ಮೀಟಿಂಗ್ ನಡೆಸುತ್ತಿದ್ದಾರೆ. ಸಿಎಂ ಆದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸುತ್ತಿದ್ದಾರೆ.

ಈ ಸಭೆಯಲ್ಲಿ ನೂತನ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಹಾಗೆಯೇ ಪ್ರಮಾಣ ವಚನ ಸ್ವೀಕರಿಸಿದ ಎಂಟು ಸಚಿವರು ಮೀಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ.

ಈ ಸಭೆಯಲ್ಲಿ ಕಾಂಗ್ರೆಸ್‌ ಘೋಷಿಸಿರುವ ಐದು ಯೋಜನೆಗಳಿಗೆ ಅನುಮೋದನೆ ಸಿಗಲಿದೆ. ಈಗಾಗಲೇ ಸಿದ್ದರಾಮಯ್ಯ ಹೇಳಿರುವಂತೆ ಪಂಚ ಯೋಜನೆಗಳು ಜಾರಿಯಾಗುವಂತೆ ಆದೇಶ ಹೊರಬೀಳುವ ಸಾಧ್ಯತೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!