October 14, 2026
Wednesday, October 14, 2026
spot_img

ನಕಲಿ ಔಷಧ ಜಾಲಕ್ಕೆ ಮೊದಲ ತಲೆದಂಡ: FDA ಅಧಿಕಾರಿ ಸಸ್ಪೆಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇತ್ತೀಚಿಗೆ ಬೆಳಕಿಗೆ ಬಂದಿರುವ ನಕಲಿ ಔಷಧ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ.

ಚಾಮರಾಜಪೇಟೆಯ ಕೃಪಾ ಹೆಲ್ತ್ ಕೇರ್ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಆರೋಪದ ಹಿನ್ನೆಲೆಯಲ್ಲಿ ಸರ್ಕಲ್-1 ಸಹಾಯಕ ಔಷಧ ನಿಯಂತ್ರಕ ಓಂಕಾರೇಶ್ವರ್ ಅವರನ್ನು ಅಮಾನತು ಮಾಡಲಾಗಿದೆ.

ಎಸ್‌ಐಟಿ ತನಿಖೆ ನಡೆಯುತ್ತಿದೆ

ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಸಚಿವ ಯು.ಟಿ. ಖಾದರ್, ನಕಲಿ ಔಷಧ ಜಾಲದ ಸಂಪೂರ್ಣ ಸರಪಳಿ ಪತ್ತೆಹಚ್ಚಲು ಎಸ್‌ಐಟಿ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಔಷಧಗಳು ಯಾವ ಆಸ್ಪತ್ರೆಗಳಿಗೆ ಪೂರೈಕೆಯಾಗಿವೆ ಹಾಗೂ ಅವುಗಳನ್ನು ಬಳಸಿದ ರೋಗಿಗಳ ವಿವರ ಸಂಗ್ರಹಿಸಲು FDA ಮುಂದಾಗಿದೆ. ಔಷಧ ಸೇವನೆಯಿಂದ ಯಾವುದೇ ಅಡ್ಡಪರಿಣಾಮ ಉಂಟಾಗಿದೆಯೇ ಎಂಬ ಬಗ್ಗೆಯೂ ಮಾಹಿತಿ ಪಡೆಯಲಾಗುತ್ತಿದೆ.

ಇದನ್ನೂ ಓದಿ:

ಈಗಾಗಲೇ ಹಲವು ಫಾರ್ಮಸಿಗಳ ಪರವಾನಗಿಗಳನ್ನು ರದ್ದುಪಡಿಸಲಾಗಿದ್ದು, ಕೆಲವನ್ನು ಅಮಾನತುಗೊಳಿಸಲಾಗಿದೆ. ತನಿಖೆಗೆ ಸಹಕರಿಸದ ಸಂಸ್ಥೆಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಕಪ್ಪುಪಟ್ಟಿಗೆ ಸೇರಿಸುವ ಕುರಿತು ಚರ್ಚೆ

ನಕಲಿ ಔಷಧ ತಯಾರಿಕೆ, ತಪ್ಪು ಲೇಬಲಿಂಗ್ ಹಾಗೂ ಗುಣಮಟ್ಟದ ಉಲ್ಲಂಘನೆಗೆ ಇನ್ನಷ್ಟು ಕಠಿಣ ಶಿಕ್ಷೆ ವಿಧಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ತಪ್ಪಿತಸ್ಥ ಕಂಪನಿಗಳನ್ನು ಶಾಶ್ವತವಾಗಿ ಕಪ್ಪುಪಟ್ಟಿಗೆ ಸೇರಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ನಕಲಿ ಔಷಧ ದಂಧೆಯ ಮೂಲ ಪತ್ತೆಹಚ್ಚುವುದರ ಜೊತೆಗೆ, ರೋಗಿಗಳ ಸುರಕ್ಷತೆಗೆ ಆದ್ಯತೆ ನೀಡಿ ನಿಯಂತ್ರಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು ಸರ್ಕಾರದ ಮುಂದಿರುವ ಪ್ರಮುಖ ಸವಾಲಾಗಿದೆ.

Must Read