Monday, August 8, 2022

Latest Posts

FIRST DAY, FIRST SHOW: ರಾಬರ್ಟ್ ಹಬ್ಬ ಮಾಡಿ ಸಂಭ್ರಮಿಸಿದ ಅಭಿಮಾನಿಗಳು

ಹೊಸದಿಗಂತ ಆನ್‌ಲೈನ್ ಡೆಸ್:

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಇಂದು ತೆರೆಕಂಡಿದ್ದು, ದರ್ಶನ್ ಅಭಿಮಾನಿಗಳು ಖುಷಿಯಲ್ಲಿ ಮಿಂದೆದ್ದಿದ್ದಾರೆ.
ಬಹುತೇಕ ಕಡೆಗಳಲ್ಲಿ ಬೆಳಗ್ಗಿನ ಜಾವವೇ ಶೋ ಆರಂಭವಾಗಿದ್ದು, ಅಭಿಮಾನಿಗಳು ಬೆಳಗ್ಗೆಯೇ ಥಿಯೇಟರ್ ಮುಂದೆ ಹಾಜರಾಗಿದ್ದಾರೆ.
ಥಿಯೇಟರ್ ಬಳಿ ಕಟೌಟ್‌ಗೆ ಹಾಲಿನ ಅಭಿಷೇಕ ಮಾಡಿ, ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಮೊದಲ ದಿನದ ಮೊದಲ ಶೋ ನೋಡಿದ ಅಭಿಮಾನಿಗಳು, ಥಿಯೇಟರ್‌ನಲ್ಲಿಯೇ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ.
ಶಿವರಾತ್ರಿಯೊಂದಿಗೆ ರಾಬರ್ಟ್ ಜಾತ್ರೆ ಜೋರಾಗಿ ನಡೆಯುತ್ತಿದೆ. ಬೆಂಗಳೂರು, ಮೈಸೂರು, ಶಿವಮೊಗ್ಗ, ದಾವಣಗೆರೆ ಸೇರಿದಂತೆ ಹಲವೆಡೆ ಅಭಿಮಾನಿಗಳು ಮುಗಿಬಿದ್ದು ಸಿನಿಮಾ ವೀಕ್ಷಿಸಿದ್ದಾರೆ. ಬೆಂಗಳೂರಿನ ಸಂತೋಷ್ ಚಿತ್ರಮಂದಿರಕ್ಕೆ ನಿರ್ದೇಶಕ ತರುಣ್ ಸುಧೀರ್, ನಟಿ ಆಶಾ ಭಟ್ ಸೇರಿದಂತೆ ಚಿತ್ರತಂಡ ಭೇಟಿ ನೀಡಿ ಸಿನಿಮಾ ವೀಕ್ಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss