ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಮಗ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ ಎಸ್ಟಿ ಅನುದಾನದ ಹಣ ಬಳಸಿರುವ ವಿಚಾರವನ್ನು ಮುಂದಿಟ್ಟುಕೊಂಡು ಸದನ ಆರಂಭಕ್ಕೂ ಮುನ್ನವೇ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ.
ಸಿಎಂ ಸಿದ್ದರಾಮಯ್ಯ, ವಾಲ್ಮೀಕಿ ನಿಗಮದ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾ ನಿರತ ಬಿಜೆಪಿ ನಾಯಕರು ಆಗ್ರಹಿಸಿದರು. ರಾಜ್ಯ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಿಂತು ಆಕ್ರೋಶ ಹೊರಹಾಕಿದರು.
ಇದೇ ವೇಳೆ ಸಿಎಂ ಸಿದ್ದರಾಮಯ್ಯಗೂ ಬಿಜೆಪಿಯ ಪ್ರತಿಭಟನೆ ಬಿಸಿ ತಟ್ಟಿತ್ತು. ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾಗಲೇ ಸಿಎಂ ಕಾರು ಆಗಮಿಸಿತ್ತು. ಈ ವೇಳೆ ಕೆಲಕಾಲ ಗೊಂದಲ ಉಂಟಾಗಿತ್ತು.
ಸದನದ ಹೊರಗೆ ದೊಡ್ಡ ಪ್ರತಿಭಟನೆ ನಡೆಸಿರುವ ಬಿಜೆಪಿ, ಸದನದ ಒಳಗೂ ಪ್ರತಿಭಟನೆ ನಡೆಸಲು ಯೋಜನೆ ಹಾಕಿಕೊಂಡಿದೆ. ಸದ್ಯ ಅಗಲಿದ ಗಣ್ಯರಿಗೆ ವಿಧಾನಸಭೆ ಕಲಾಪದಲ್ಲಿ ಸಂತಾಪ ಸೂಚಿಸಲಾಗಿದ್ದು, ಮಂಗಳವಾರದಿಂದ ಅಸಲಿ ವಾಗ್ಯುದ್ಧ ಶುರುವಾಗಲಿದೆ.