ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಂಗನ ಕಾಯಿಲೆ ಭೀತಿ ಹೆಚ್ಚಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಂಕಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ಸಿದ್ದಾಪುರ ಸಮೀಪದ ಜಿಡ್ಡಿ ಗ್ರಾಮದ 65 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಉಂಟಾದ ಮೊದಲ ಸಾವಿನ ಪ್ರಕರಣ ಇದಾಗಿದೆ.
ಪರಿಣಾಮಕಾರಿ ಲಸಿಕೆ ಇನ್ನೂ ಲಭ್ಯವಾಗದ ಕಾರಣ ಅಧಿಕಾರಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಈವರೆಗೂ 103 ಮಂದಿಗೆ ಸೋಂಕು ತಗುಲಿದೆ.