ದೇಶದಲ್ಲಿ 3.5 ಕೋಟಿಗೂ ಹೆಚ್ಚು ಮಕ್ಕಳಿಗೆ ಕೊರೋನಾ ಲಸಿಕೆಯ ಮೊದಲ ಡೋಸ್‌: ಕೇಂದ್ರ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಜನವರಿ 3 ರಿಂದ 15-18 ವಯೋಮಾನದ 3.5 ಕೋಟಿಗೂ ಹೆಚ್ಚು ಮಕ್ಕಳಿಗೆ ಕೊರೋನಾ ಲಸಿಕೆಯ ಮೊದಲ ಡೋಸ್‌ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡ ಅವರು, ಕೊರೋನಾ ಲಸಿಕೆ ಪಡೆಯುವಲ್ಲಿ ಯುವಕರು ಅತ್ಯುತ್ಸಾಹ ತೋರಿದ್ದಾರೆ. ಜನವರಿ 3 ರಿಂದ 15- 18 ವರ್ಷದ ಮಕ್ಕಳಿಗೆ ಲಸಿಕೆ ಹಾಕಲು ಆರಂಭಿಸಲಾಗಿದೆ. ಇಲ್ಲಿಯವರೆಗೆ 3.5 ಕೋಟಿ ತರುಣರು ಲಸಿಕೆಯ ಮೊದಲ ಡೋಸ್​ ಪಡೆದುಕೊಂಡಿದ್ದಾರೆ. ನನ್ನೆಲ್ಲಾ ಯುವ ಸ್ನೇಹಿತರಿಗೆ ಅಭಿನಂದನೆಗಳು ಎಂದು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!