ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದಲ್ಲೇ ಅತಿ ಎತ್ತರದ ರಸ್ತೆ ಮತ್ತು ರೈಲು ಮೇಲ್ಸೇತುವೆ ಇಂದು ರಾಗಿಗುಡ್ಡದಲ್ಲಿ ಉದ್ಘಾಟನೆಗೊಳ್ಳಲಿದೆ. ಇಂದು ಮಧ್ಯಾಹ್ನ 3:00 ಗಂಟೆಗೆ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಡಬ್ಬಲ್ ಡೆಕ್ಕರ್ ಫ್ಲೈ ಓವರ್ ಉದ್ಘಾಟನೆಗೊಳ್ಳಲಿದೆ.
ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ವರೆಗಿನ ಡಬಲ್ ಡೆಕ್ಕರ್ ಮೇಲ್ಸೇತುವೆ ಎರಡು ಬದಿಯಲ್ಲಿ ಎರಡು ರಸ್ತೆಗಳನ್ನು ಹೊಂದಿದ್ದು, ಬಸ್, ಕಾರು ಸೇರಿದಂತೆ ಎಲ್ಲಾ ರೀತಿಯ ವಾಹನಗಳು ಇಲ್ಲಿ ಸಂಚರಿಸಲಿವೆ.
ಎರಡನೇ ಹಂತದ ಮಾರ್ಗದಲ್ಲಿ ಮೆಟ್ರೊ ರೈಲು ಸಂಚರಿಸಲಿದೆ. ಮೆಟ್ರೋ ಕಂಬಕ್ಕೆ ಎರಡೂ ಬದಿಯಲ್ಲಿ ರೆಕ್ಕೆಗಳ ರೀತಿಯಲ್ಲಿ ಈ ಸೇತುವೆ ನಿರ್ಮಾಣ ಮಾಡಲಾಗಿದೆ.