ಮಹಿಳಾ ಪ್ರೀಮಿಯರ್ ಲೀಗ್​ : ಇಂದಿನ ಮೊದಲ ಪಂದ್ಯದಲ್ಲಿ ಆರ್​ಸಿಬಿ vs ಡೆಲ್ಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಚೊಚ್ಚಲ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್​ಗೆ (WPL 2023) ಅದ್ಧೂರಿ ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಬರೋಬ್ಬರಿ 143 ರನ್​ಗಳ ಮೂಲಕ ಯಶಸ್ಸು ಪಡೆದುಕೊಂಡಿತು. ಇದೀಗ ಎರಡನೇ ದಿನ ಎರಡು ಪಂದ್ಯಗಳನ್ನು ಆಯೋಜಿಸಲಾಗಿದ್ದು, ಟೂರ್ನಿಯ ಮೊದಲ ಡಬಲ್ ಹೆಡರ್ ಆಗಿದ್ದು ಮಧ್ಯಾಹ್ನ ಮತ್ತು ರಾತ್ರಿ ಪಂದ್ಯಗಳು ನಡೆಯಲಿದೆ.

ಮಧ್ಯಾಹ್ನ 3:30ಕ್ಕೆ ಆರಂಭವಾಗಲಿರುವ ಮೊದಲ ಪಂದ್ಯದಲ್ಲಿ ಸ್ಮೃತಿ ಮಂಧಾನ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡವನ್ನು (RCB vs DC) ಎದುರಿಸಲಿದೆ. ಸಂಜೆ 7:30ಕ್ಕೆ ಶುರುವಾಗಲಿರುವ ದ್ವಿತೀಯ ಪಂದ್ಯ ಯುಪಿ ವಾರಿಯರ್ಸ್ ಮತ್ತು ಗುಜರಾತ್ ಜೈಂಟ್ಸ್ (UPZ vs GGT) ನಡುವೆ ಆಯೋಜಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!