3ನೇ ಅವಧಿಯ ಮೊದಲ ವಿದೇಶ ಪ್ರವಾಸ: ಇಟಲಿ ತೆರಳಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಟಲಿಯ ಅಪುಲಿಯಾ ಪ್ರದೇಶದಲ್ಲಿ ನಾಳೆ (ಜೂನ್ 14) ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲುಇಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ವಿಮಾನದಲ್ಲಿ ಇಟಲಿಗೆ ತೆರಳಿದ್ದಾರೆ.

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಸತತ ಮೂರನೇ ಅವಧಿಗೆ ಅಧಿಕಾರದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ರಧಾನಿಯವರ ಮೊದಲ ವಿದೇಶಿ ಭೇಟಿ ಇದಾಗಿದೆ.

ಇಟಲಿಗೆ ಹೊರಡುವ ಮುನ್ನ ಮಾತನಾಡಿದ ಪ್ರಧಾನಿ ಮೋದಿ, G7 ಔಟ್‌ರೀಚ್ ಶೃಂಗಸಭೆಯು ಜಾಗತಿಕವಾಗಿ ನಿರ್ಣಾಯಕ ವಿಷಯಗಳ ಕುರಿತು ಚರ್ಚಿಸಲು ಒಂದು ಅವಕಾಶವಾಗಿದೆ ಎಂದು ಹೇಳಿದ್ದಾರೆ.

ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಅವರ ಮೊದಲ ವಿದೇಶಿ ಭೇಟಿಯನ್ನು ಇಟಲಿಗೆ ನೀಡುತ್ತಿರುವುದು ಸಂತೋಷವಾಗಿದೆ. ಜಿ7 ಶೃಂಗಸಭೆಯಲ್ಲಿ ನಡೆಯುವ ಚರ್ಚೆಯ ಸಮಯದಲ್ಲಿ ಕೃತಕ ಬುದ್ಧಿಮತ್ತೆ, ಶಕ್ತಿ, ಆಫ್ರಿಕಾ ಮತ್ತು ಮೆಡಿಟರೇನಿಯನ್ ಬಗ್ಗೆ ಗಮನ ಹರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಟಲಿಯ ಅಪುಲಿಯಾ ಪ್ರದೇಶದಲ್ಲಿ G7 ಎಂದು ಕರೆಯಲ್ಪಡುವ ಗ್ರೂಪ್ ಆಫ್ ಸೆವೆನ್‌ನ ಶೃಂಗಸಭೆ ಶುಕ್ರವಾರ ನಡೆಯಲಿದೆ.

‘ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ, ನಾನು ಜೂನ್ 14ರಂದು ನಡೆಯುವ G7 ಔಟ್ರೀಚ್ ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಯ ಅಪುಲಿಯಾ ಪ್ರದೇಶಕ್ಕೆ ಪ್ರಯಾಣಿಸುತ್ತಿದ್ದೇನೆ. ಸತತ ಮೂರನೇ ಅವಧಿಯಲ್ಲಿ ಇಟಲಿಗೆ ನನ್ನ ಮೊದಲ ಭೇಟಿಯು ಜಿ- 7 ಶೃಂಗಸಭೆಗೆ ಆಗಿದೆ’ ಎಂದು ಪ್ರಧಾನಿ ಮೋದಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಕೂಡ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ ನಡೆಸುವ ನಿರೀಕ್ಷೆಯಿದೆ. ಇನ್ನು ಕೆಲವು ನಾಯಕರೊಂದಿಗೆ ಮೋದಿ ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆ ಇದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!