ನಿರೂಪಕಿ ಗೀತಾಂಜಲಿ ಅಯ್ಯರ್ ನಿಧನಕ್ಕೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೂರದರ್ಶನದ ಮೊದಲ ಮಹಿಳಾ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾದ ಗೀತಾಂಜಲಿ ಅಯ್ಯರ್ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬುಧವಾರ ಸಂಜೆ ಮೃತಪಟ್ಟಿದ್ದಾರೆ. ಗೀತಾಂಜಲಿ ಅಯ್ಯರ್ ಅವರ ನಿಧನಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸಂತಾಪ ಸೂಚಿಸಿದ್ದಾರೆ.

ದೂರದರ್ಶನಕ್ಕೆ ಆಕೆಯ ಸೇವೆ ಅತ್ಯುತ್ತಮವಾಗಿದೆ ಎಂದು ಶ್ಲಾಘಿಸಿದರು. ಗೀತಾಂಜಲಿ ಅವರ ಕುಟುಂಬ ಸದಸ್ಯರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ಗೀತಾಂಜಲಿ ಅಯ್ಯರ್ ಕೋಲ್ಕತ್ತಾದ ಲೊರೆಟೊ ಕಾಲೇಜಿನಲ್ಲಿ ಪದವಿಯನ್ನು ಪೂರ್ಣಗೊಳಿಸಿದರು. ಅವರು 1971 ರಲ್ಲಿ ದೂರದರ್ಶನ ಸೇರಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿದರು. ದೂರದರ್ಶನ ವೃತ್ತಿಜೀವನದ ನಂತರ, ಅವರು ಭಾರತೀಯ ಕೈಗಾರಿಕಾ ಒಕ್ಕೂಟದಲ್ಲಿ ಕೆಲಸ ಮಾಡಿದ್ದರು.

ನಾಲ್ಕು ಬಾರಿ ಅತ್ಯುತ್ತಮ ನಿರೂಪಕಿ ಪ್ರಶಸ್ತಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರಕ್ಕೆ ನೀಡಿದ ಸೇವೆಗಾಗಿ 1989 ರಲ್ಲಿ ಅತ್ಯುತ್ತಮ ಮಹಿಳೆ ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿಯನ್ನು ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!