ಅಬುಧಾಬಿಯಲ್ಲಿ ಮೊದಲ ಹಿಂದು ದೇವಾಲಯ: ಬೆಂಬಲಕ್ಕಾಗಿ ಯುಎಇ ಅಧ್ಯಕ್ಷರಿಗೆ ಮೋದಿ ಧನ್ಯವಾದ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಬುಧಾಬಿಯಲ್ಲಿ (Abu Dhabi) ಮೊದಲ ಹಿಂದು ದೇವಾಲಯ ಲೋಕಾರ್ಪಣೆಗೊಳ್ಳಲು ಸಜ್ಜಾಗಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi)ಮಂಗಳವಾರ ಯುಎಇಗೆ ಬಂದಿಳಿದಿದ್ದಾರೆ.

ಇವು ವೇಳೆ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ (Sheikh Mohamed bin Zayed Al Nahyan) ಅವರ ಬೆಂಬಲಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ನಿಮ್ಮ ಬೆಂಬಲವಿಲ್ಲದೆ ಇಲ್ಲಿ BAPS (ಬೋಚಸನ್ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥಾ) ದೇವಾಲಯದ ನಿರ್ಮಾಣವು ಸಾಧ್ಯವಾಗುತ್ತಿರಲಿಲ್ಲ ಎಂದು ಮೋದಿ ಯುಎಇ ಅಧ್ಯಕ್ಷರಿಗೆ ದ್ವಿಪಕ್ಷೀಯ ಸಭೆಯ ಸಂದರ್ಭದಲ್ಲಿ ಹೇಳಿದರು .

ಎರಡು ದಿನಗಳ ಭೇಟಿಗಾಗಿ ಮಧ್ಯಾಹ್ನ ಅಬುಧಾಬಿಗೆ ಬಂದಿಳಿದ ಮೋದಿ ಅವರು ಮಂಗಳವಾರ ಅಬುಧಾಬಿಯಲ್ಲಿ ಕಲ್ಲಿನಿಂದ ನಿರ್ಮಿತವಾಗಿರುವ ಮೊದಲ ಹಿಂದು ದೇವಾಲಯವಾದ ಬೋಚಸನ್ವಾಸಿ ಶ್ರೀ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (BAPS) ಮಂದಿರವನ್ನು ಉದ್ಘಾಟಿಸಲಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!