ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದಲ್ಲಿ ಮುಂದಿನ ವರ್ಷ ನಡೆಯುವ ಸಾರ್ವತ್ರಿಕ ಚುನಾವಣೆಗೆ ಇದೇ ಮೊದಲ ಬಾರಿಗೆ ಹಿಂದೂ ಯುವತಿ ನಾಮಪತ್ರ ಸಲ್ಲಿಸಿದ್ದಾರೆ.
ಖೈಬರ್ ಪಖ್ತುಂಖ್ವಾದ ಬುನೇರ್ ಜಿಲ್ಲೆಯ ಸಾಮಾನ್ಯ ಸ್ಥಾನಕ್ಕೆ ಹಿಂದೂ ಮಹಿಳೆ ಸವೇರಾ ಪ್ರಕಾಶ್ ಎಂಬ ಮಹಿಳೆ ನಾಮಪತ್ರ ಸಲ್ಲಿಸಿದ್ದಾರೆ.
ಹಿಂದೂ ಸಮುದಾಯದ ಸದಸ್ಯೆಯಾಗಿರುವ ಸವೇರಾ ಪ್ರಕಾಶ್ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ ಟಿಕೆಟ್‌ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರಿದ್ದಾರೆ. ಸವೇರಾ ತಂದೆ ಓಂ ಪ್ರಕಾಶ್ ಅವರು ನಿವೃತ್ತ ವೈದ್ಯರಾಗಿದ್ದು, ಕಳೆದ 35 ವರ್ಷಗಳಿಂದ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಸದಸ್ಯರಾಗಿದ್ದಾರೆ. ತಂದೆಯ ಹಾದಿಯಲ್ಲಿ ಮಗಳು ಸಾಗಲು ನಿರ್ಧರಿಸಿದ್ದಾರೆ.
ಚುನಾವಣೆಗೆ ಸಾಮಾನ್ಯ ಸ್ಥಾನಕ್ಕೆ ಬುನರ್‌ನಿಂದ ನಾಮಪತ್ರ ಸಲ್ಲಿಸಿರುವ ಮೊದಲ ಮಹಿಳೆ ಸವೇರಾ ಪ್ರಕಾಶ್ ಆಗಿದ್ದಾರೆ ಎಂದು ಸ್ಥಳೀಯ ರಾಜಕಾರಣಿ ಸಲೀಂ ಖಾನ್ ಹೇಳಿದ್ದಾರೆ.