ಮೊದಲು ಜಾರಿ ಮಾಡಿ ,ಆ ಮೇಲೆ ಯೋಚನೆ ಮಾಡುತ್ತಾರೆ: 2000 ರೂ. ನೋಟು ಹಿಂಪಡೆದ ಬಗ್ಗೆ ಕಾಂಗ್ರೆಸ್‌ ಟೀಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

2,000 ಮುಖಬೆಲೆಯ ನೋಟುಗಳನ್ನು ಹಿಂಪಡೆದಿರುವ ಭಾರತೀಯ ರಿಸರ್ವ್ ಬ್ಯಾಂಕ್ ಘೋಷಣೆಗೆ ಕಾಂಗ್ರೆಸ್‌ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಆರ್‌ಬಿಐ ನಡೆ ಕುರಿತಾದ ಲೇಖನವೊಂದನ್ನು ಹಂಚಿಕೊಂಡಿರುವ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್, ‘ನಮ್ಮ ಸ್ವಶೈಲಿಯ ವಿಶ್ವಗುರು.ಮೊದಲು ಜಾರಿ ಮಾಡಿ,ಆಮೇಲೆ ಯೋಚನೆ ಮಾಡುತ್ತಾರೆ’ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್‌ನ ಮತ್ತೊಬ್ಬ ನಾಯಕ ಪವನ್ ಖೇರಾ ಕೂಡ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡಿದ್ದು, ‘2016ರ ನವೆಂಬರ್ 8ರ ಭೂತವು ಮತ್ತೊಮ್ಮೆ ರಾಷ್ಟ್ರವನ್ನು ಕಾಡಲು ಮರಳಿದೆ’ಎಂದು ವ್ಯಂಗ್ಯ ಮಾಡಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ₹2,000 ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿರುವುದಾಗಿ ಘೋಷಿಸಿತು. ಚಲಾವಣೆಯಲ್ಲಿರುವ ನೋಟುಗಳನ್ನು ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಮಾಡಬಹುದು ಅಥವಾ ಸೆಪ್ಟೆಂಬರ್ 30 ರೊಳಗೆ ಬದಲಾವಣೆ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!