ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿ ಭವನ ಮದುವೆಯ ಸಮಾರಂಭಕ್ಕೆ ಸಜ್ಜಾಗುತ್ತಿದೆ.
ರಾಷ್ಟ್ರಪತಿ ಭವನದ PSO ಆಗಿರುವ CRPF ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾಗೆ ಈ ಅದೃಷ್ಟ ಒಲಿದು ಬಂದಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು CRPF ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾ ಅವರು ರಾಷ್ಟ್ರಪತಿ ಭವನದಲ್ಲಿ ಮದುವೆಯಾಗಲು ವಿಶೇಷ ಅನುಮತಿ ನೀಡಿದ್ದಾರೆ. ಇದೇ ಫೆಬ್ರವರಿ 12ರಂದು ಇಲ್ಲಿನ ಮದರ್ ಥೆರೆಸಾ ಕ್ರೌನ್ ಕಾಂಪ್ಲೆಕ್ಸ್‌ನಲ್ಲಿ ಪೂನಂ ಗುಪ್ತಾ ಅವರ ಮದುವೆ ನಿಗದಿಯಾಗಿದೆ.
CRPF ಅಸಿಸ್ಟಂಟ್ ಕಮಾಂಡೆಂಟ್ ಪೂನಂ ಗುಪ್ತಾ ಅವರು ಜಮ್ಮು-ಕಾಶ್ಮೀರದಲ್ಲಿ CRPF ಅಸಿಸ್ಟೆಂಟ್ ಕಮಾಂಡೆಂಟ್ ಅವನೀಶ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಪೂನಂ ಗುಪ್ತಾ, ಅವನೀಶ್ ಮದುವೆಗೆ ಸಂಬಂಧಿಕರು ಕೆಲ ಸ್ನೇಹಿತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಪೂನಂ ಗುಪ್ತಾ ಯಾರು?
ಪೂನಂ ಗುಪ್ತಾ ಅವರು 74ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸಂಪೂರ್ಣ ಮಹಿಳಾ ತುಕಡಿಯನ್ನು ನಿರ್ವಹಿಸಿದ್ದರು. ಸದ್ಯ ರಾಷ್ಟ್ರಪತಿ ಭವನದಲ್ಲಿ ವೈಯಕ್ತಿಕ ಭದ್ರತಾ ಅಧಿಕಾರಿಯಾಗಿ (PSO) ಸೇವೆ ಸಲ್ಲಿಸುತ್ತಿದ್ದಾರೆ.
ಪೂನಂ ಗಣಿತಶಾಸ್ತ್ರ ಮತ್ತು ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ, ಗ್ವಾಲಿಯರ್‌ನ ಜಿವಾಜಿ ವಿಶ್ವವಿದ್ಯಾಲಯದಿಂದ BEd ಪದವಿ ಪಡೆದುಕೊಂಡಿದ್ದಾರೆ. 2018ರ ಯುಪಿಎಸ್‌ಸಿ ಸಿಆರ್‌ಪಿಎಫ್ ಪರೀಕ್ಷೆಯಲ್ಲಿ 81ನೇ Rank ಪಡೆದಿದ್ದಾರೆ. ಬಿಹಾರದ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದ ಪೂನಂ ಆ ಬಳಿಕ ಕಠಿಣ ಪ್ರದೇಶಗಳಲ್ಲೂ ತಮ್ಮ ಕರ್ತವ್ಯ ನಿಷ್ಠೆ ಮೆರೆದು ಸೈ ಎನಿಸಿಕೊಂಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲೂ ತಮ್ಮದೇ ಅಭಿಮಾನಿ ಬಳಗ ಹೊಂದಿರುವ ಪೂನಂ, ಆಗಾಗ್ಗೆ ಮಹಿಳಾ ಸಬಲೀಕರಣ ಹಾಗೂ ಸ್ಫೂರ್ತಿದಾಯಕ ಸಂದೇಶಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ.
ಜನಸ್ನೇಹಿ ಸರಕಾರ ಜನರ ನಡುವೆ ಸಂಭ್ರಮ ಪಡುವ ಐತಿಹಾಸಿಕ ಘಟನೆ.ಆದರೂ ಬೀದಿನಾಯಿಗಳ ಹೊಟ್ಟೆ ಕಿಚ್ಚಿನ ರೋದನ !!!
ಅನಿಷ್ಟಗಳು ” ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷೀಲಿ ”
ಅಂದಂತೆ.ನ್ಯಾಯಾಂಗ ಮೊದಲು ಶುದ್ಧೀಕರಣ/ಆಮೂಲಾಗ್ರ ಬದಲಾವಣೆ ಆಗದೇ ಉಳಿದ ಸತ್ಕಾರ್ಯಗಳು ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದಂತೆ.