ಎಸ್.ಎಂ.ಕೃಷ್ಣ, ನಾರಾಯಣಮೂರ್ತಿ, ಪಡುಕೋಣೆಗೆ ಮೊದಲ ‘ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿ’

ಹೊಸದಿಗಂತ ಡಿಜಿಟಲ್‌ ಡೆಸ್ಕ್‌, ಬೆಂಗಳೂರು:
ಕರ್ನಾಟಕ ಸರ್ಕಾರವು ಸ್ಥಾಪಿಸಿರುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯ ಮೊದಲ ಆವೃತ್ತಿಗೆ ಹಿರಿಯ ರಾಜಕಾರಣಿ ಎಸ್‌.ಎಂ. ಕೃಷ್ಣ, ಭಾರತೀಯ ಐಟಿ ಪ್ರವರ್ತಕ ಎನ್‌ಆರ್ ನಾರಾಯಣ ಮೂರ್ತಿ ಮತ್ತು ಬ್ಯಾಡ್ಮಿಂಟನ್ ದಂತಕಥೆ ಪ್ರಕಾಶ್ ಪಡುಕೋಣೆ ಅವರನ್ನು ಆಯ್ಕೆ ಮಾಡಲಾಗಿದೆ.
ಜೂನ್ 27ರಂದು ವಿಧಾನಸೌಧದಲ್ಲಿ ಆಯೋಜಿಸಿದ್ದ 513 ನೇ ಕೆಂಪೇಗೌಡ ಜಯಂತಿ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದ್ದಾರೆ. ಈ ಪ್ರಶಸ್ತಿಯು ರೂ.5 ಲಕ್ಷ ನಗದು ಬಹುಮಾನವನ್ನು ಹೊಂದಿದೆ.
ಪ್ರಶಸ್ತಿ ಪುರಸ್ಕೃತರ ಬಗ್ಗೆ ಮಾತನಾಡಿರುವ ಐಟಿ/ಬಿಟಿ ಮತ್ತು ಉನ್ನತ ಶಿಕ್ಷಣ ಸಚಿವ ಸಿಎನ್ ಅಶ್ವಥ್ ನಾರಾಯಣ್, ಈ ಮೂವರು ಸಾಧಕರು ಬೆಂಗಳೂರಿನ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಪ್ರಶಸ್ತಿ ವಿಜೇತರನ್ನು ಆಯ್ಕೆ ಮಾಡಲು ಸಾಧಕರನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರದ ಸ್ಟಾರ್ಟಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಿತ್ತು. ಸಮಿತಿಯಲ್ಲಿ ಐಟಿ ಪರಿಣತ ಟಿ.ವಿ.ಮೋಹನ್ ದಾಸ್ ಪೈ, ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಸ್ಥಾಪಕ ಆರ್.ಬಾಲಸುಬ್ರಮಣ್ಯಂ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಎಂ.ಕೆ.ಶಂಕರಲಿಂಗೇಗೌಡ ಸದಸ್ಯರಾಗಿದ್ದರು. ಕೆಡಿಎ ಆಯುಕ್ತ ಆರ್ ವಿನಯದೀಪ್ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!