ಐಪಿಎಲ್- 2024 ರ ಮೊದಲ ಪಂದ್ಯ: ಚೆನ್ನೈ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ಬ್ಯಾಟಿಂಗ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಐಪಿಎಲ್ 2024ರ ಟೂರ್ನಿಗೆ ಅದ್ದೂರಿ ಚಾಲನೆ ಸಿಕ್ಕಿದ್ದು, ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಚೆನ್ನೈನಲ್ಲಿ ನಡೆಯುತ್ತಿರುವ ಈ ಪಂದ್ಯ ಉದ್ಘಾಟನಾ ಪಂದ್ಯ ಮಾತ್ರವಲ್ಲ, ಹಲವು ಕಾರಣಗಳಿಂದ ಮಹತ್ವ ಪಡೆದುಕೊಂಡಿದೆ. ಈಗಾಗಲೇ ಆರ್‌ಸಿಬಿ ಮಹಿಳಾ ತಂಡ ಟ್ರೋಫಿ ಗೆದ್ದುಕೊಂಡಿದೆ. ಹೀಗಾಗಿ ಫಾಫ್ ಡುಪ್ಲಿಸಿಸ್ ತಂಡದ ಮೇಲೆ ನಿರೀಕ್ಷೆ ಹೆಚ್ಚಾಗಿದೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವವನ್ನು ಎಂಎಸ್ ಧೋನಿ ತ್ಯಜಿಸಿದ್ದಾರೆ. ರುತುರಾಜ್ ಗಾಯಕ್ವಾಡ್‌ಗೆ ನಾಯಕತ್ವ ನೀಡಲಾಗಿದೆ.

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಬೌಲರ್‌ಗೆ ಒಂದು ಓವರ್‌ನಲ್ಲಿ ಎರಡು ಬೌನ್ಸರ್ ಎಸೆಯಲು ಅವಕಾಶ ಮಾಡಲಾಗಿದೆ. ಈ ಮೂಲಕ ಐಪಿಎಲ್ ಟೂರ್ನಿಯಲ್ಲಿ ಮತ್ತಷ್ಟು ರೋಚಕವಾಗಿಸಲು ಬಿಸಿಸಿಐ ಎಲ್ಲಾ ತಯಾರಿ ನಡೆಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!