ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಆರ್ ಪುರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದ ಮೊದಲ ಮೆಟ್ರೋ ರೈಲಿನ ಪ್ರಾಯೋಗಿಕ ಸಂಚಾರ ನಿನ್ನೆ ಯಶಸ್ವಿಯಾಗಿ ನಡೆದಿದೆ.
ಬೈಯಪ್ಪನಹಳ್ಳಿ ಕಡೆಗೆ ಸಾಗಿ ತಪಾಸಣೆಗಾಗಿ ಕೆಲವು ಸ್ಥಳಗಳಲ್ಲಿ ನಿಲ್ಲಿಸಲಾಗಿತ್ತು . 2.8 ಕಿ.ಮೀ ದೂರವನ್ನು 47 ನಿಮಿಷಗಳಲ್ಲಿ ಪೂರ್ಣಗೊಳಿಸಿದೆ. ಇಂದು ಕೂಡ ಬೈಯಪ್ಪನಹಳ್ಳಯಿಂದ ಪೂರ್ಣ ಪ್ರಮಾಣದ ಪರೀಕ್ಷೆ ನಡೆದಿದೆ.