ಭಾರತದಲ್ಲಿ ಮೊದಲ ಮಂಕಿಪಾಕ್ಸ್‌ ಪತ್ತೆ !

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಭಾರತದ ಮೊದಲ ಮಂಕಿಪಾಕ್ಸ್ ಪ್ರಕರಣ ಕೇರಳದ ಕೊಲ್ಲಂನಲ್ಲಿ ದೃಢಪಟ್ಟಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಗುರುವಾರ ಹೇಳಿದ್ದಾರೆ. ಯುಎಇಯಿಂದ ವಾಪಸ್ಸಾದ ವ್ಯಕ್ತಿಯಲ್ಲಿ ಮಂಕಿಪಾಕ್ಸ್‌ ವೈರಸ್‌ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಅವರು ವಿದೇಶದಲ್ಲಿ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದರು ಎನ್ನಲಾಗಿದ್ದು ಅವರಲ್ಲಿ ರೋಗದ ಗುಣಲಕ್ಷಣ ಕಾಣಿಸಿಕೊಂಡಿತ್ತು. ಈಗ ಅವರಿಗೆ ಮಂಕಿಪಾಕ್ಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ.

“ಆತಂಕಪಡುವ ಅಗತ್ಯವಿಲ್ಲ. ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಮತ್ತು ರೋಗಿಯು ಸ್ಥಿರವಾಗಿದ್ದಾರೆ. ಅವರು ಯುಎಇಯಿಂದ ಪ್ರಯಾಣಿಸಿ ಜುಲೈ 12 ರಂದು ತಿರುವನಂತಪುರಂ ವಿಮಾನ ನಿಲ್ದಾಣವನ್ನು ತಲುಪಿದರು. ಯುಎಇಯಲ್ಲಿರುವ ಅವರ ಸ್ನೇಹಿತನಲ್ಲಿ ಕೆಲವು ದಿನಗಳ ಹಿಂದೆ ಮಂಕಿ ಪಾಕ್ಸ್‌ ಕಾಣಿಸಿಕೊಂಡಿತ್ತು” ಎಂದು ಆರೋಗ್ಯ ಸಚಿವೆ ಹೇಳಿದ್ದಾರೆ.

ರೋಗಿಯ ನಿಕಟ ಸಂಪರ್ಕದಲ್ಲಿ ಅವರ ತಂದೆ ಮತ್ತು ತಾಯಿ ಸೇರಿದ್ದಾರೆ ಮತ್ತು ಅವರನ್ನು ತಿರುವನಂತಪುರಂ ವೈದ್ಯಕೀಯ ಕಾಲೇಜಿನಲ್ಲಿ (ಟಿವಿಎಂ) ನಿಗಾ ಇರಿಸಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಮಂಕಿಪಾಕ್ಸ್ ಒಂದು ವೈರಲ್ ಝೂನೋಸಿಸ್ (ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್) ಆಗಿದ್ದು, ಸಿಡುಬು ರೋಗಿಗಳಲ್ಲಿ ಹಿಂದೆ ಕಂಡುಬರುವ ರೋಗಲಕ್ಷಣಗಳನ್ನು ಹೋಲುತ್ತದೆ, ಆದರೂ ಇದು ಪ್ರಾಯೋಗಿಕವಾಗಿ ಕಡಿಮೆ ತೀವ್ರವಾಗಿರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!