ಮೊದಲ ಏಕದಿನ ಪಂದ್ಯ: ಇಂಗ್ಲೆಂಡ್ ವಿರುದ್ಧ ಭಾರತ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತ ಹಾಗೂ ಆತಿಥೇಯ ಇಂಗ್ಲೆಂಡ್ ತಂಡಗಳ ನಡುವೆ ಮೊದಲ ಏಕದಿನ ಪಂದ್ಯದಲ್ಲಿ ಟಾಸ್​ ಗೆದ್ದಿರುವ ರೋಹಿತ್​ ಶರ್ಮಾ ಬೌಲಿಂಗ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಮೂರನೇ ಟಿ20 ಪಂದ್ಯದ ವೇಳೆ ಗಾಯಗೊಂಡಿರುವ ವಿರಾಟ್​ ಕೊಹ್ಲಿ ಇಂದಿನ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಸ್ಥಾನದಲ್ಲಿ ಶ್ರೇಯಸ್​ ಅಯ್ಯರ್​​ ಅವಕಾಶ ಪಡೆದುಕೊಂಡಿದ್ದಾರೆ.

ಟೀಂ ಇಂಡಿಯಾ ಐವರು ಬ್ಯಾಟರ್‌ಗಳು, ಇಬ್ಬರು ಆಲ್ರೌಂಡರ್‌ಗಳು ಹಾಗೂ ನಾಲ್ವರು ಬೌಲರ್‌ಗಳೊಂದಿಗೆ ಕಣಕ್ಕಿಳಿದಿದೆ. ನಾಯಕ ರೋಹಿತ್ ಶರ್ಮಾ ಜತೆಗೆ ಗಬ್ಬರ್ ಸಿಂಗ್ ಖ್ಯಾತಿಯ ಶಿಖರ್ ಧವನ್ ಇನಿಂಗ್ಸ್ ಆರಂಭಿಸಲಿದ್ದಾರೆ.

ಟೀಂ ಇಂಡಿಯಾ: ರೋಹಿತ್ ಶರ್ಮಾ(ಕ್ಯಾಪ್ಟನ್​),ಶಿಖರ್​ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್​, ರಿಷಭ್ ಪಂತ್​(ವಿ.ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್​ ಶಮಿ, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಹಲ್​, ಪ್ರಸಿದ್ಧ್ ಕೃಷ್ಣ

ಇಂಗ್ಲೆಂಡ್‌: ಜೋಸ್ ಬಟ್ಲರ್‌(ನಾಯಕ), ಜೇಸನ್ ರಾಯ್‌, ಜೋ ರೂಟ್‌, ಜಾನಿ ಬೇರ್‌ಸ್ಟೋವ್‌, ಬೆನ್ ಸ್ಟೋಕ್ಸ್‌, ಲಿಯಾಮ್ ಲಿವಿಂಗ್‌ಸ್ಟೋನ್‌, ಮೋಯಿನ್ ಅಲಿ, ಕ್ರೆಗ್ ಓವರ್‌ಟನ್, ಡೇವಿಡ್ ವಿಲ್ಲಿ, ರೀಸ್‌ ಟಾಪ್ಲಿ, ಬ್ರೈಡನ್ ಕೇರ್ಸ್‌‌.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!