ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ರಾತ್ರಿ ವೇಳೆ ವಂದೇ ಭಾರತ್ ರೈಲು ಸಂಚರಿಸಲಿದೆ.
ದೀಪಾವಳಿ ರಜೆ ಹಿನ್ನೆಲೆ ಜನ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ನವೆಂಬರ್ 21ರಂದು ಬೆಂಗಳೂರು ಮತ್ತು ಚೆನ್ನೈ ನಡುವೆ ವಂದೇ ಭಾರತ್ ರೈಲು ರಾತ್ರಿ ವೇಳೆ ಸಂಚಾರ ಕೈಗೊಳ್ಳಲಿದೆ.
ನವೆಂಬರ್ 20ರಂದು ಯಶವಂತಪುರ/ಎಸ್‌ಎಂವಿಟಿ ಬೆಂಗಳೂರು ಮತ್ತು ಚೆನ್ನೈ ಸೆಂಟ್ರಲ್ ನಡುವೆ ಮತ್ತೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವಿಶೇಷ ಸಂಚಾರ ನಡೆಸಲಿದೆ. ಬೆಂಗಳೂರಿನ ಎಸ್‌ಎಂವಿಟಿಯಿಂದ ಸಂಜೆ 5.15 ಕ್ಕೆ ಹೊರಡಲಿರುವ ವಂದೇ ಭಾರತ್ ವಿಶೇಷ ರೈಲು, ಅದೇ ದಿನ ರಾತ್ರಿ 10 ಗಂಟೆಗೆ ಚೆನ್ನೈ ಸೆಂಟ್ರಲ್ ತಲುಪಲಿದೆ
ಎಂದು ದಕ್ಷಿಣ ರೈಲ್ವೆ ತಿಳಿಸಿದೆ.