ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯ: ಶೇ.60 ರಷ್ಟು ವೋಟಿಂಗ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಶುಕ್ರವಾರ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದ್ದು, ವಿವಿಧ ರಾಜ್ಯಗಳ 102 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ.60 ರಷ್ಟು ಮತದಾನವಾಗಿದೆ.

21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಿದೆ.ಸುಮಾರು ಶೇ.60 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪಶ್ಚಿಮ ಬಂಗಾಳದಲ್ಲಿ ಶೇ. 77.57 ರಷ್ಟು ವೋಟಿಂಗ್ ಆಗಿದೆ. ತಮಿಳುನಾಡಿನಲ್ಲಿ ಶೇ.63.2, ರಾಜಸ್ಥಾನದಲ್ಲಿ ಶೇ.50.3, ಉತ್ತರ ಪ್ರದೇಶದಲ್ಲಿ ಶೇ.57.5 ಮತ್ತು ಮಧ್ಯಪ್ರದೇಶದಲ್ಲಿ ಶೇ.63.3ರಷ್ಟು ಮತದಾನವಾಗಿದೆ.

ಮೊದಲ ಹಂತದಲ್ಲಿ ತಮಿಳುನಾಡಿನ ಎಲ್ಲಾ 39 ಕ್ಷೇತ್ರಗಳಲ್ಲಿ ಇಂದು ಚುನಾವಣೆ ನಡೆದಿದೆ. ರಾಜಸ್ಥಾನ (12), ಉತ್ತರ ಪ್ರದೇಶ (8), ಮಧ್ಯಪ್ರದೇಶ (6), ಉತ್ತರಾಖಂಡ (5), ಅರುಣಾಚಲ ಪ್ರದೇಶ (2), ಮೇಘಾಲಯ (2), ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು (1), ಮಿಜೋರಾಂ (1) ), ನಾಗಾಲ್ಯಾಂಡ್ (1), ಪುದುಚೇರಿ (1), ಸಿಕ್ಕಿಂ (1) ಮತ್ತು ಲಕ್ಷದ್ವೀಪ (1). ಅಲ್ಲದೆ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5, ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಮಣಿಪುರದಲ್ಲಿ ಎರಡು ಮತ್ತು ತ್ರಿಪುರಾ, ಜಮ್ಮು ಮತ್ತು ಕಾಶ್ಮೀರ ಮತ್ತು ಛತ್ತೀಸ್‌ಗಢದಲ್ಲಿ ತಲಾ 1 ಸ್ಥಾನಗಳಲ್ಲಿ ಚುನಾವಣೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!