ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ: ಇವಿಎಂ ಸೇರಿದ ಅಭ್ಯರ್ಥಿಗಳ ಭವಿಷ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ನಡೆದಿದ್ದ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ.

ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ನಡೆದ ಮತದನ ಸಂಜೆ 6 ಗಂಟೆಗೆ ಮುಕ್ತಾಯವಾಗಿದ್ದು, ಸರತಿ ಸಾಲಿನಲ್ಲಿ ನಿಂತಿರುವವರಿಗಷ್ಟೇ ಮತದಾನಕ್ಕೆ ಅವಕಾಶ ನೀಡಲಾಗಿದೆ.
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು -ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ -ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ, ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಅಭ್ಯರ್ಥಿಗಳ ಭವಿಷ್ಯ ಇವಿಎಂ ಸೇರಿದೆ.

ರಾಜ್ಯದಲ್ಲಿ ಮೊದಲ ಹಂತ ಮತ್ತು ದೇಶದಲ್ಲಿ ಎರಡನೇ ಹಂತದ ಚುನಾವಣೆಗೆ ಮತದಾನ ಇಂದು ನಡೆದಿದೆ. ಜೂನ್ 4ರ ಮಂಗಳವಾರ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!