ನಾಳೆಯಿಂದ ಬೆಂಗಳೂರು-ಮೈಸೂರು ಹೈವೇಯಲ್ಲಿ ಮೊದಲ ಹಂತದ ಟೋಲ್ ಸಂಗ್ರಹ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ನಾಳೆಯಿಂದ ಬೆಂಗಳೂರು-ಮೈಸೂರು ಹೈವೇಯಲ್ಲಿ ಮೊದಲ ಹಂತದ ಟೋಲ್ (Toll Collection) ಸಂಗ್ರಹಕ್ಕೆ ಎನ್‌ಹೆಚ್‌ಎಐನಿಂದ ತೀರ್ಮಾನಿಸಲಾಗಿದೆ.

ನಾಳೆ ಬೆಳಗ್ಗೆ 8 ಗಂಟೆಯಿಂದ ಎನ್‌ಹೆಚ್‌ಎಐ ಟೋಲ್ ಸಂಗ್ರಹಿಸಲಿದ್ದು, ಸುಮಾರು 55 ಕಿಲೋಮೀಟರ್ ಹೈವೇಗೆ ಟೋಲ್ ಸಂಗ್ರಹಕ್ಕೆ ನಿರ್ಧರಿಸಲಾಗಿದೆ. ಇನ್ನು ಟೋಲ್ ಸಂಗ್ರಹಕ್ಕೆ ವಿವಿಧ ಸಂಘಟನೆಗಳಿಂದ ತೀವ್ರ ವಿರೋಧ ಹಿನ್ನೆಲೆ ಟೋಲ್ ಪ್ಲಾಜಾಗಳಲ್ಲಿ ಸೂಕ್ತ ಪೊಲೀಸ್​ ಭದ್ರತೆ ಒದಗಿಸುವಂತೆ ರಾಮನಗರ ಡಿಸಿ ಮತ್ತು ಎಸ್‌ಪಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್​ ಅವರು ಮನವಿ ಮಾಡಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ, ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ, ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ, ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ. ನಾಳೆ ಬೆಳೆಗ್ಗೆಯಿಂದಲೇ ಟೋಲ್ ಸಂಗ್ರಹ ವಿರೋಧಿಸಿ ಸಂಘಟನೆಗಳಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಧರಣಿಗೆ ಕರೆ ಹಿನ್ನೆಲೆ ಸವಾರರಿಗೆ ನಾಳೆ ಪ್ರತಿಭಟನೆಯ ಬಿಸಿ ತಟ್ಟಲಿದೆ.

55 ಕಿಲೋಮೀಟರ್​​ಗೆ 155 ರೂ. ಟೋಲ್ ನಿಗದಿಯಾಗಿದೆ. ಮತ್ತುಳಿದ 55 ಕಿಲೋಮೀಟರ್​ಗೆ 155 ರೂ. ನಿಗದಿಪಡಿಸಲಾಗಿದೆ. ಅಲ್ಲಿಗೆ ಒಟ್ಟು 300 ರೂ. ಟೋಲ್ ಪಾವತಿಸಬೇಕು. ಒಂದು ದಿವಸಕ್ಕೆ 5 ಕೋಟಿ ರೂ. ಸಂಗ್ರಹವಾಗಲಿದೆ. ಅಲ್ಲಿಗೆ ವರ್ಷಕ್ಕೆ 2,444 ಕೋಟಿ ರೂ. ಸಂಗ್ರಹವಾದಂತಾಗಲಿದೆ. 10 ವರ್ಷ ಟೋಲ್ ಸಂಗ್ರಹಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಅಲ್ಲಿಗೆ 10 ವರ್ಷದಲ್ಲಿ 20,440 ಕೋಟಿ ರೂ. ಸಂಗ್ರಹವಾಗಲಿದೆ. ರಸ್ತೆ ಮಾಡಲು 12 ಸಾವಿರ ಕೋಟಿ ರೂ. ವೆಚ್ಚವಾಗಿದೆ. ಅಲ್ಲಿಗೆ 8 ಸಾವಿರ ಕೋಟಿ ರೂ. ಹೆಚ್ಚುವರಿಯಾಗಿ ಟೋಲ್ ವಸೂಲಿಯಾದಂತಾಗಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!