ರಾಜ್ಯದ 14 ಕ್ಷೇತ್ರಗಳಿಗೆ ನಾಳೆ ಮೊದಲ ಹಂತದ ಮತದಾನ: ಸರ್ಕಾರಿ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮೊದಲ ಹಂತದ ಮತದಾನ ನಡೆಯಲಿದ್ದು, ಈ ಹಿನ್ನೆಲೆ ಚುನಾವಣಾ ಆಯೋಗ ಭರ್ಜರಿ ಸಿದ್ಧತೆ ನಡೆಸಿದೆ. ಚುನಾವಣಾ ಕೆಲಸಗಳಿಗಾಗಿ ಬಸ್ ಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದರಿಂದ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ದಟ್ಟವಾಗಿದೆ.

ಚುನಾವಣಾ ಕಾರ್ಯಕ್ಕೆ ಬಸ್ ಬಳಕೆಯಾಗುವುದರಿಂದ ಇಂದು ಹಾಗೂ ನಾಳೆ ಸರ್ಕಾರಿ ಸಾರಿಗೆ, ಖಾಸಗಿ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

2,100 ಕೆ ಎಸ್ ಆರ‍್ ಟಿ ಸಿ ಬಸ್ ಹಾಗೂ 1,700 ಬಿಎಂಟಿಸಿ ಬಸ್ ಗಳನ್ನು ಚುನಾವಣಾ ಆಯೋಗ ಬಳಸಿಕೊಂಡಿದೆ.ಪ್ರತಿ ವಾಹನಕ್ಕೂ ಪ್ರತ್ಯೇಕ ದರ ನಿಗದಿ ಮಡಲಾಗಿದ್ದು, ಸರ್ಕಾರಿ ಬಸ್ ಗಳಿಗೆ ಕೀ,ಮೀಗೆ 57 ರೂಪಾಯಿಯಂತೆ ದರ ನಿಗದಿ ಮಾಡಲಾಗಿದೆ. ಈ ನಿಟ್ಟಿನಲ್ಲಿ ಇಂದು ಹಾಗೂ ನಾಳೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ದಟ್ಟವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!