ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ 2024ರ ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಇಂದು ಆರಂಭವಾಗಿದೆ. ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು. ಎಲ್ಲೆಡೆ ಉತ್ಸಾಹಭರಿತ ಪ್ರತಿಕ್ರಿಯೆಗಳನ್ನು ಕಾಣಬಹುದಾಗಿದೆ.
ಸಂಸತ್ತಿನ ಚುನಾವಣೆಗಳು ದೇಶಾದ್ಯಂತ ಏಳು ಹಂತಗಳಲ್ಲಿ ನಡೆಯಲಿದ್ದು, ಜೂನ್ 1 ರಂದು ಮುಕ್ತಾಯಗೊಳ್ಳಲಿದೆ. ಮತಗಳ ಎಣಿಕೆ ಮತ್ತು ಲೋಕಸಭೆ ಚುನಾವಣೆ ಫಲಿತಾಂಶ ಘೋಷಣೆ ಜೂನ್ 4 ರಂದು ನಡೆಯಲಿದೆ. ಒಟ್ಟು 102 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದೆ.
ಇಂದು ಮತದಾನ ಮಾಡಲಿರುವ ರಾಜ್ಯಗಳು:
ತಮಿಳುನಾಡಿನ 39 ಕ್ಷೇತ್ರಗಳು
ರಾಜಸ್ಥಾನದ 12 ಕ್ಷೇತ್ರಗಳು
ಉತ್ತರ ಪ್ರದೇಶದ 8 ಕ್ಷೇತ್ರಗಳು
ಮಧ್ಯ ಪ್ರದೇಶದ 6 ಕ್ಷೇತ್ರಗಳು
ಉತ್ತರಾಖಂಡದ 5 ಕ್ಷೇತ್ರಗಳು
ಮಹಾರಾಷ್ಟ್ರದ 5 ಕ್ಷೇತ್ರಗಳು
ಅಸ್ಸಾಂನ 5 ಕ್ಷೇತ್ರಗಳು
ಬಿಹಾರದ 4 ಕ್ಷೇತ್ರಗಳು
ಪಶ್ಚಿಮ ಬಂಗಾಳದ 3 ಕ್ಷೇತ್ರಗಳು
ಮಣಿಪುರದ 2 ಕ್ಷೇತ್ರಗಳು
ಅರುಣಾಚಲ ಪ್ರದೇಶದ 2 ಕ್ಷೇತ್ರಗಳು
ಮೇಘಾಲಯ 2 ಕ್ಷೇತ್ರಗಳು
ಪುದುಚೆರಿ, ಅರುಣಾಚಲ ಪ್ರದೇಶ, ಛತ್ತೀಸ್‌ಘಡ, ಜಮ್ಮು ಕಾಶ್ಮೀರ, ಲಡಾಕ್, ಲಕ್ಷದೀಪ, ಮಿಜೋರಾಮ್, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರದ ತಲಾ 1 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.