ರಾಜ್ಯದಲ್ಲಿ ನಾಳೆ ಮೊದಲ ಹಂತದ ಮತದಾನ: ಎಷ್ಟು ಮತಗಟ್ಟೆ ಸ್ಥಾಪನೆ? ಹೇಗಿದೆ ತಯಾರಿ…!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದಲ್ಲಿ ನಾಳೆ ಮೊದಲ ಹಂತದ ಮತದಾನ ನಡೆಯಲಿದ್ದು,  ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಚುನಾವಣಾ ಆಯೋಗವು ಸಕಲ ಸಿದ್ಧತೆ ಕೈಗೊಂಡಿದೆ .

ರಾಜ್ಯದಲ್ಲಿ ಒಟ್ಟು   30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಮೊದಲ ಹಂತದಲ್ಲಿ 14 ಕ್ಷೇತ್ರದಲ್ಲಿ ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, 30,602 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 30,577 ಪ್ರಮುಖ ಮತಗಟ್ಟೆಗಳಾಗಿದ್ದು, 25 ಉಪ ಮತಗಟ್ಟೆಗಳಾಗಿವೆ. 14 ಕ್ಷೇತ್ರದಲ್ಲಿ 2.88 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಿದ್ದಾರೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಚುನಾವಣಾ ಕಾರ್ಯಕ್ಕಾಗಿ 1.40 ಲಕ್ಷ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಇದರ ಜತೆಗೆ ಐದು ಸಾವಿರ ಸೂಕ್ಷ್ಮ ವೀಕ್ಷಕರು, 50 ಸಾವಿರ ಪೊಲೀಸ್ ಸಿಬ್ಬಂದಿ, 65 ಸಾವಿರ ಕೇಂದ್ರ ಮತ್ತು ರಾಜ್ಯ ಸಶಸ್ತ್ರಮೀಸಲು ಪಡೆಯನ್ನು ನೇಮಕ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಸ್ಥಾಪನೆಯಾಗಿರುವ 30,602 ಮತಗಟ್ಟೆ ಗಳಲ್ಲಿ 19,701 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. 1370 ಮತಗಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಲಾ ಗಿದೆ. ಇನ್ನುಳಿದ ಮತಗಟ್ಟೆಗಳಲ್ಲಿ ಸಶಸ್ತ್ರ ಮೀಸಲು ಪಡೆಗಳನ್ನು ನಿಯೋಜನೆ ಮಾಡಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಅತಿ ಹೆಚ್ಚು,2911 ,2911 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಡಿಮೆ, 1842 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.

ಶುಕ್ರವಾರದಂದು 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲೆಗಳು ಮತ್ತು ಕಾಲೇಜುಗಳು, ಸಾರ್ವಜನಿಕ ವಲಯದ ಉದ್ಯಮಗಳಿಗೆ ವೇತನ ಸಹಿತ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಉದ್ಯಮಗಳು, ಕೈಗಾರಿಕೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ/ಅಧಿಕಾರಿ ಅಥವಾ ದಿನಗೂಲಿ ವೇತನದಲ್ಲಿ ಕೆಲಸ ಮಾಡುವ ಮತದಾರರು ತಮ್ಮ ಮತ ಚಲಾಯಿಸಲು ಅನುವು ಮಾಡಿಕೊಡಬೇಕು ಎಂಬುದಾಗಿ ಸೂಚಿಸಲಾಗಿದೆ ಎಂದು ಹೇಳಿದರು.

 ಪರ್ಯಾಯ ದಾಖಲೆಗಳು:
ಮತದಾರರು ಮತ ಚಲಾಯಿಸಲು ಮತದಾನ ಕೇಂದ್ರದಲ್ಲಿ ಮತದಾರರ ಗುರುತಿನ ಚೀಟಿ ಕೊಂಡೊಯ್ಯಬೇಕು. ಗುರುತಿನ ಚೀಟಿ ಇಲ್ಲದಿದ್ದರೆ ಆಧಾರ್ ಕಾರ್ಡ್, ನರೇಗಾ ಕಾರ್ಡ್, ಬ್ಯಾಂಕ್/ಅಂಚೆ ಕಚೇರಿ ನೀಡಿದ ಭಾವಚಿತ್ರ ಇರುವ ಪಾಸ್ ಬುಕ್, ಆರೋಗ್ಯ ವಿಮಾ ಸ್ಟಾರ್ಟ್ ಕಾರ್ಡ್, ಚಾಲನಾ ಪರವಾನಗಿ, ಪಾನ್‌ ಕಾರ್ಡ್, ಪಾಸ್‌ಪೋರ್ಟ್, ಭಾವಚಿತ್ರ ಇರುವ ಪಿಂಚಣಿಯ ದಾಖಲೆ, ಕೇಂದ್ರ/ರಾಜ್ಯ/ ಸಾರ್ವಜನಿಕ ಸಂಸ್ಥೆಗಳು ನೀಡಿದ ಭಾವಚಿತ್ರ ಇರುವ ಸೇವಾ ಗುರುತಿನ ಚೀಟಿಗಳು, ಸಂಸದರು, ಶಾಸಕರಿಗೆ ನೀಡಲಾದ ಗುರುತಿನ ಚೀಟಿಗಳು, ವಿಶಿಷ್ಟ ಅಂಗವೈಕಲ್ಯ ಕಾರ್ಡ್‌ಗಳ ಪೈಕಿ ಒಂದನ್ನು ತೋರಿಸಿ ಮತ ಚಲಾಯಿಸಬಹುದಾಗಿದೆ ಎಂದರು.

ಎಡಗೈ ತೋರು ಬೆರಳಿಗೆ ಶಾಯಿ:
ಈ ಬಾರಿಯ ಚುನಾವಣೆಯಲ್ಲಿ ಮತದಾರರ ಎಡಗೈ ತೋರು ಬೆರಳಿಗೆ ಗುರುತಿನ ಶಾಯಿ ಹಾಕಲಾಗುತ್ತದೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್‌ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!