ಇಸ್ರೇಲ್‌ಗೆ ಅಮೆರಿಕ ಬೆಂಬಲ: ಶಸ್ತ್ರಾಸ್ತ್ರಗಳನ್ನೊತ್ತ ಮೊದಲ ವಿಮಾನ ಲ್ಯಾಂಡಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಮಾಸ್‌ ವಿರುದ್ಧ ಯುದ್ಧದಲ್ಲಿ ಅಮೆರಿಕ ಇಸ್ರೇಲ್‌ಗೆ ತನ್ನ ಸಂಪೂರ್ಣ ಬೆಂಬಲ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಯುಎಸ್ ಶಸ್ತ್ರಾಸ್ತ್ರಗಳನ್ನು ಹೊತ್ತ ಮೊದಲ ವಿಮಾನವು ಮಂಗಳವಾರ ರಾತ್ರಿ ದಕ್ಷಿಣ ಇಸ್ರೇಲ್‌ನಲ್ಲಿ ಇಳಿಯಿತು ಎಂದು ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಟ್ವೀಟ್‌ ಮಾಡಿದೆ.

IDF ತಾನು ಸ್ವೀಕರಿಸಿದ ಶಸ್ತ್ರಾಸ್ತ್ರಗಳು ಅಥವಾ ಮಿಲಿಟರಿ ಉಪಕರಣಗಳನ್ನು ಬಹಿರಂಗಪಡಿಸಿಲ್ಲ. ಇಸ್ರೇಲ್ ಹಮಾಸ್‌ನೊಂದಿಗೆ ಯುದ್ಧ ನಡೆಸುತ್ತಿದ್ದಂತೆ, ಜೋ ಬಿಡನ್ ಈ ವಾರ ಇಸ್ರೇಲ್‌ಗೆ ಯುದ್ಧಸಾಮಗ್ರಿಗಳನ್ನು ತಲುಪಿಸಲು ಪ್ರಾರಂಭಿಸಿದೆ.

“ನಮ್ಮ ಮಿಲಿಟರಿ ಸಹಕಾರವು ಯುದ್ಧದ ಸಮಯದಲ್ಲಿ ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಯನ್ನು ಖಾತ್ರಿಪಡಿಸುವ ಪ್ರಮುಖ ಭಾಗವಾಗಿದೆ” ಎಂದು IDF ತನ್ನ ಪೋಸ್ಟ್‌ನಲ್ಲಿ ತಿಳಿಸಿದೆ. ಈ ನಡುವೆ ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು ಮಂಗಳವಾರ ಮೂರನೇ ಬಾರಿಗೆ ಯುಎಸ್ ಅಧ್ಯಕ್ಷ ಬಿಡೆನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.

ಹಮಾಸ್ ವಿರುದ್ಧದ ಯುದ್ಧವು ನಾಲ್ಕು ದಿನಗಳನ್ನು ಪೂರ್ಣಗೊಳಿಸುತ್ತಿದ್ದಂತೆ, ಒಂದು ಸಾವಿರಕ್ಕೂ ಹೆಚ್ಚು ಇಸ್ರೇಲಿಗಳು ಸಾವನ್ನಪ್ಪಿದ್ದು, 2,800 ಕ್ಕೂ ಹೆಚ್ಚು ಜನರು ಗಾಯಗೊಂಡಿರುವುದಾಗಿ IDF ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!