ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾಫಿನಾಡು ಚಿಕ್ಕಮಗಳೂರಲ್ಲಿ ಈ ವರ್ಷದ ಮೊದಲ ಮಳೆ ಎಂಟ್ರಿಕೊಟ್ಟಿದೆ.
ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ , ಕಳಸ, ಶೃಂಗೇರಿ, NR ಪುರ ಭಾಗದಲ್ಲಿ ವರುಣ ಅಬ್ಬರಿಸಿದ್ದು, ದಿಢೀರ್ ಸುರಿದ ಮಳೆಯಿಂದ ಜನರು ಕಂಗಾಲಾಗಿದ್ದಾರೆ.
ಕಳೆದ ಒಂದು ವಾದದಿಂದ ಕೊರೆಯುವ ಚಳಿ, ಶೀತ ಗಾಳಿಗೆ ಜಿಲ್ಲೆಯ ಜನರು ಹೈರಾಣಾಗಿರುವ ನಡುವೆ ಧಾರಾಕಾರವಾಗಿ ಸುರಿದ ಮಳೆ ಕಾಫಿ ಬೆಳೆಗಾರರನ್ನ ಆತಂಕಕ್ಕೆ ದೂಡಿದೆ.
ಜಿಲ್ಲೆಯಾದ್ಯಂತ ಕಾಫಿ ಫಸಲಿನ ಕೊಯ್ಲು ನಡೆಯುತ್ತಿದ್ದು, ಒಣ ಹಾಕಿದ ಕಾಫಿ ಮಳೆಯಿಂದ ಸಂಪೂರ್ಣ ನೆನೆದು ಹಾಳಾಗಿದೆ. ಕೆಲವೆಡೆ ಬೆಳೆ ನೀರಲ್ಲಿ ಕೊಚ್ಚಿ ಹೋಗಿದೆ.


