ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕಿಸ್ತಾನದ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ಇಶಾಕ್ ದಾರ್ ದಿ ರೆಸಿಸ್ಟೆನ್ಸ್ ಫ್ರಂಟ್ ಉಗ್ರ ಸಂಘಟನೆಗೆ ಸಂಸತ್‌ನಲ್ಲಿ ಬಹಿರಂಗವಾಗಿಯೇ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನ ಸಂಸತ್ತಿನಲ್ಲಿ ಭಾಷಣ ಮಾಡುವಾಗ, ಪಹಲ್ಗಾಮ್ ದಾಳಿಯನ್ನ ಟಿಆರ್‌ಎಫ್ ನಡೆಸಿದೆ ಅನ್ನೋದಕ್ಕೆ ಸಾಕ್ಷಿ ತೋರಿಸಿ ಎಂದು ಕೇಳಿರುವ ಇಶಾಕ್ ದಾರ್ ಉಗ್ರ ಸಂಘಟನೆಗೆ ನೇರ ಬೆಂಬಲ ಸೂಚಿಸಿದ್ದಾರೆ.
ಪಾಕಿಸ್ತಾನ ಮೂಲದ ದಿ ರೆಸಿಸ್ಟೆನ್ಸ್ ಫ್ರಂಟ್ ಅನ್ನು ಅಮೆರಿಕದ ವಿದೇಶಾಂಗ ಇಲಾಖೆ ಒಂದು ದಿನದ ಹಿಂದಷ್ಟೇ ಭಯೋತ್ಪಾದಕ ಸಂಘಟನೆ ಪಟ್ಟಿಗೆ ಸೇರಿಸಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರ ಪ್ರಾಣ ಬಲಿ ಪಡೆದ ಘಟನೆಯ ಹೊಣೆಗಾರಿಕೆಯನ್ನು ಈ ಸಂಘಟನೆ ವಹಿಸಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.