ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ಎ.ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ (SC ) ಒಳಮೀಸಲಾತಿ ಅನುಷ್ಠಾನಕ್ಕೆ ಆದೇಶ ನೀಡಿದೆ. ಒಳಮೀಸಲಾತಿ ಜಾರಿ ಸಂಬಂಧ ತೆಲಂಗಾಣ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಮೀಮ್ ಅಖ್ತರ್ ಅವರ ನೇತೃತ್ವದಲ್ಲಿ ಆಯೋಗವನ್ನು ರಚಿಸಿತ್ತು.
ತೆಲಂಗಾಣದಲ್ಲಿ ಎಸ್‌ಸಿ ಪಟ್ಟಿಯಲ್ಲಿ 59 ಉಪಜಾತಿಗಳಿದ್ದು, ಜನಸಂಖ್ಯೆ, ಹಿಂದುಳಿದಿರುವಿಕೆ ಆಧಾರದಲ್ಲಿ ಅವನ್ನು ಮೂರು ಗುಂಪುಗಳನ್ನಾಗಿ ಮಾಡಿ ಮೀಸಲಾತಿ ಹಂಚಿಕೆ ಮಾಡಬೇಕು ಎಂದು ಆಯೋಗ ಶಿಫಾರಸು ಮಾಡಿತ್ತು.
ಏ.14ರಿಂದ ತೆಲಂಗಾಣದಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಎಸ್‌ಸಿ ಒಳಮೀಸಲಾತಿಯನ್ನು ಅನುಷ್ಠಾನಕ್ಕೆ ತರಲಾಗಿದೆ. ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ.