ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಾಜಾ ಕದನ ವಿರಾಮದ ಮೊದಲ ಹೆಜ್ಜೆ ಯಶಸ್ವಿಯಾಗಿದ್ದು, ಹಮಾಸ್ ಮೂವರು ಇಸ್ರೇಲಿ ಮಹಿಳಾ ಒತ್ತೆಯಾಳುಗಳನ್ನು ಅಂತರರಾಷ್ಟ್ರೀಯ ರೆಡ್‌ಕ್ರಾಸ್ ಸಮಿತಿಗೆ ಹಸ್ತಾಂತರಿಸಿದ್ದು, ಮೂವರು ಒತ್ತೆಯಾಳುಗಳು ತಾಯ್ನಾಡಿಗೆ ತಲುಪಿದ್ದಾರೆ.
ಬಿಡುಗಡೆಯಾದ ಮೂವರು ಒತ್ತೆಯಾಳುಗಳು ತನ್ನ ಸೈನಿಕರೊಂದಿಗೆ ದೇಶದ ಭೂಪ್ರದೇಶವನ್ನು ಪ್ರವೇಶಿಸಿದ್ದಾರೆ ಎಂದು ಇಸ್ರೇಲ್ ಮಿಲಿಟರಿ ತಿಳಿಸಿದೆ.
ಬಿಡುಗಡೆಯಾದ ಒತ್ತೆಯಾಳುಗಳು ಪ್ರಸ್ತುತ ದಕ್ಷಿಣ ಇಸ್ರೇಲ್‌ನ ಆರಂಭಿಕ ಸ್ವಾಗತ ಕೇಂದ್ರಕ್ಕೆ ಹೋಗುತ್ತಿದ್ದಾರೆ. ಅಲ್ಲಿ ಅವರು ಪ್ರಾಥಮಿಕ ವೈದ್ಯಕೀಯ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಸೇನೆಯು ತಿಳಿಸಿದೆ.