ಮೊದಲ ಟಿ20 ಪಂದ್ಯ: ಬಾಂಗ್ಲಾ ಮಹಿಳಾ ಟೀಮ್ ವಿರುದ್ಧ ಗೆದ್ದ ಭಾರತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ .

ಬಾಂಗ್ಲಾ ದ ಡಕಾಡಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ (Team India) ನಾಯಕಿ ಹರ್ಮನ್​ಪ್ರೀತ್ ಕೌರ್ ಬೌಲಿಂಗ್ ಆಯ್ದುಕೊಂಡಿದ್ದರು.ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡಕ್ಕೆ ಶಥಿ ರಾಣಿ (21) ಹಾಗೂ ಶಮೀಮಾ (17) ಉತ್ತಮ ಆರಂಭ ಒದಗಿಸಿದರೆ , ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೋಭನಾ 23 ರನ್​ಗಳ ಕಾಣಿಕೆ ನೀಡಿದರು.ಅಂತಿಮವಾಗಿ 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 114 ಗಳಿಸಿದರು.

115 ರನ್​ಗಳ ಸುಲಭ ಗುರಿ ಪಡೆದ ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ (0) ವಿಫಲರಾದರು. ಇನ್ನು ಸ್ಮೃತಿ ಮಂಧಾನ 38 ರನ್ ಬಾರಿಸಿ ಮಿಂಚಿದರೆ, ಜೆಮಿಮಾ ರೊಡ್ರಿಗಸ್ 11 ರನ್​ಗಳಿಸಿ ಔಟಾದರು.

ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕಿ ಹರ್ಮನ್​ಪ್ರೀತ್ ಕೌರ್ 35 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 54 ರನ್​ ಬಾರಿಸಿದರು. ಈ ಮೂಲಕ 16.2 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 118 ರನ್​ಗಳಿಸಿ ಟೀಮ್ ಇಂಡಿಯಾ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!