ಹೊಸದಿಗಂತ ವರದಿ,ಶಿವಮೊಗ್ಗ:
ಭಾರತ ವಿರುದ್ಧದ ಮೊದಲ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ರೋಹಿತ್ ಶರ್ಮಾ, ದಿನೇಶ್ ಕಾರ್ತಿಕ್, ರಿಷಬ್ ಪಂತ್, ಆರ್ ಅಶ್ವಿನ್ ತಂಡ ಸೇರಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ ತಂಡದಲ್ಲಿ ಅಲ್ಜಾರಿ ಜೋಸೆಫ್ ಪದಾರ್ಪಣೆ ಮಾಡಿದ್ದಾರೆ. ಇನ್ನು ಶಿಮ್ರೊನ್ ಹೆಟ್ಮೆಯರ್ ತಂಡ ಸೇರಿಕೊಂಡಿದ್ದಾರೆ.
ಟೀಂ ಇಂಡಿಯಾ ಪ್ಲೇಯಿಂಗ್ 11
ರೋಹಿತ್ ಶರ್ಮಾ(ನಾಯಕ), ರಿಷಬ್ ಪಂತ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ ರವೀಂದ್ರ ಜಡೇಜಾ , ರವಿ ಬಿಶ್ನೋಯ್ ಭುವನೇಶ್ವರ್ ಕುಮಾರ್, ಆರ್ ಅಶ್ವಿನ್, ಅರ್ಶದೀಪ್ ಸಿಂಗ್
ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ ಕ್ವೀನ್ ಸ್ವೀಪ್ ಗೆಲುವು ದಾಖಲಿಸಿದೆ. ಈ ಮೂಲಕ ವಿಂಡೀಸ್ ಪ್ರವಾಸವನ್ನು ಭರ್ಜರಿಯಾಗಿ ಆರಂಭಿಸಿದೆ. ಇದೀಗ 5 ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲು ಮುಂದಾಗಿದೆ.