ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಬಹುನಿರೀಕ್ಷಿತ ಬಜೆಟ್ ಮಂಡನೆ ಆರಂಭವಾಗಿದ್ದು, ಮೊದಲ ಬಾರಿಗೆ ಕೆಲಸ ಹುಡುಕುವವರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ ಸಿಕ್ಕಿದೆ.
ಸರ್ಕಾರದ ಒಂಬತ್ತು ಆದ್ಯತೆಗಳಲ್ಲಿ ಒಂದು ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ. ಇದರ ಅಡಿಯಲ್ಲಿ, ಮೊದಲ ಬಾರಿಗೆ ಉದ್ಯೋಗಾಕಾಂಕ್ಷಿಗಳಾಗಿರುವವರಿಗೆ ದೊಡ್ಡ ಸಹಾಯ ದೊರೆಯಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು.
ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15 ಸಾವಿರ ರೂ. ಇಪಿಎಫ್ಒನಲ್ಲಿ ನೋಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯಲಿದ್ದಾರೆ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.