ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿದ್ದು,ಆರೋಗ್ಯಾಧಿಕಾರಿ ಡೆಂಗ್ಯೂಗೆ ಬಲಿಯಾಗಿದ್ದಾರೆ.
ಹುಣಸೂರು ತಾಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಂದ್ರ (32) ಮೃತ ಸಮುದಾಯ ಆರೋಗ್ಯ ಅಧಿಕಾರಿಯಾಗಿದ್ದಾರೆ.
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಸಮುದಾಯ ಆರೋಗ್ಯಾಧಿಕಾರಿಯೊಬ್ಬರು ಡೆಂಗ್ಯೂಗೆ ಬಲಿಯಾಗಿದ್ದಾರೆ. 35 ವರ್ಷದ ನಾಗೇಂದ್ರ ಮೃತ ಆರೋಗ್ಯಾಧಿಕಾರಿಯಾಗಿದ್ದಾರೆ. ಜಿಲ್ಲೆಯಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ. ಇವರು ಹುಣಸೂರು ತಾಲ್ಲೂಕಿನ ಗುರುಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.