ಮಂಗನ ಕಾಯಿಲೆಗೆ ಮೊದಲ ಬಲಿ: ಶಿವಮೊಗ್ಗದ ಯುವತಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗದ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಹೊಸನಗರದ 19 ವರ್ಷದ ಯುವತಿ ಕ್ಯಾಸನೂರು ಫಾರೆಸ್ಟ್ ಡಿಸೀಸ್‌ನಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿವಮೊಗ್ಗದ ಮೆಗ್ಗಾನ್‌ನಿಂದ ಸೀದ ಮಣಿಪಾಲದ ಕಸ್ತೂರಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೇ ಯುವತಿ ಮೃತಪಟ್ಟಿದ್ದಾರೆ. ಮಂಗನ ಕಾಯಿಲೆಗೆ ರಾಜ್ಯದಲ್ಲಿ ಸಂಭವಿಸಿದ ಮೊದಲ ಸಾವು ಇದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!